ಬಂಟ್ವಾಳ 'ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಬೇಸಿಗೆ ಶಿಬಿರ ಪೂರಕವಾಗವಾಗಲಿದೆ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಹೇಳಿದರು. ಮಾಣಿ ಗ್ರಾಮ ಪಂಚಾಯತ್ತಿನ ಅರಿವು ಕೇಂದ್ರದ ವತಿಯಿಂದ ಜರುಗಿದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳ ಜ್ಞಾನದ ಬೆಳವಣಿಗೆಯ ದೃಷ್ಟಿಯಿಂದ ಸರಕಾರ ಹಮ್ಮಿಕೊಳ್ಳುತ್ತಿರುವ ಇಂತಹ ಕಾರ್ಯಕ್ರಮ ಶ್ಲಾಘನೀಯ ಎಂದು ಅವರು ಹೇಳಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಸುಜಾತ, ಸದಸ್ಯರಾದ
ಬಾಲಕೃಷ್ಣ ಆಳ್ವ ಕೊಡಾಜೆ, ಇಬ್ರಾಹಿಂ.ಕೆ.ಮಾಣಿ, ನಾರಾಯಣ ಶೆಟ್ಟಿ, ಪ್ರೀತಿ ಡಿನ್ನಾ ಪಿರೇರಾ, ಮಿತ್ರಾಕ್ಷಿ ಭಾಗವಹಿಸಿದ್ದರು.ತರಬೇತುದಾರು ಮತ್ತು ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಗ್ರಂಥಪಾಲಕಿ ಗೀತಾಶ್ವಿನಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.














