ನಾಣ್ಯ: ಕುಲಾಲ ಸುಧಾರಕ ಸಂಘದ ಸಂಭ್ರಮದ ವಾರ್ಷಿಕೋತ್ಸವ ಸಮಾರಂಭ.

Coastal Bulletin
ನಾಣ್ಯ: ಕುಲಾಲ ಸುಧಾರಕ ಸಂಘದ ಸಂಭ್ರಮದ ವಾರ್ಷಿಕೋತ್ಸವ ಸಮಾರಂಭ.

ಬಂಟ್ವಾಳ: ಫರಂಗಿಪೇಟೆ ಕುಲಾಲ ಸುಧಾರಕ ಸಂಘ, ಪುದು ನಾಣ್ಯ ಇದರ ೩೩ನೇ ವಾರ್ಷಿಕೋತ್ಸವ ಸಂಭ್ರಮ ಭಾನುವಾರ ಮಾರಿಪಳ್ಳ ಕುಲಾಲ ಸಮುದಾಯ ಭವನದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ನವೀಕೃತಗೊಂಡ ಕುಲಾಲ ಸಮುದಾಯ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, “ಫರಂಗಿಪೇಟೆ ಕುಲಾಲ ಸಂಘ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದು, ಮುಂದಿನ ಪೀಳಿಗೆಗೆ ಸಮುದಾಯ ಭವನ ಅತ್ಯಗತ್ಯವಾಗಿದೆ. ಇದರ ಇನ್ನಷ್ಟು ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು” ಎಂದು ಹೇಳಿದರು.

ಫರಂಗಿಪೇಟೆ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಕಮಲಾರಮೇಶ್ ಅಧ್ಯಕ್ಷತೆ ವಹಿಸಿದ್ದರು. ಕುಲಶೇಖರ ವೀರನಾರಾಯಣ ದೇವಸ್ಥಾನದ ಅಧ್ಯಕ್ಷ ಪ್ರೇಮಾನಂದ ಕುಲಾಲ್ ಕೋಡಿಕಲ್, ದ.ಕ. ಜಿಲ್ಲಾ ಕೋಳಿ ಸಾಗಾಣಿಕೆದಾರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ದಯಾನಂದ ಕುಲಾಲ್, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ

ಅಧ್ಯಕ್ಷ ಬಿ. ರಮೇಶ್ ಸಾಲಿಯಾನ್ ಸಂಚಯಗಿರಿ, ವೀರನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ರತ್ನಾ ಕುಲಾಲ್ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ನಯನಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ವೇಳೆ ಹರಿನಾಮ ಸಂಕೀರ್ತಕ ಕೊರಗಪ್ಪ ಮೂಲ್ಯ ವೈ.ಕೆ. ಕೊಡ್ಮಾಣ್ ಹಾಗೂ ಕ್ರೀಡಾಪಟು ಭವಿಷ್ ಸುಜೀರ್ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ನಡೆಯಿತು. ಕೆ.ಆರ್. ದೇವದಾಸ ಮಾಸ್ತರ್ ಸ್ವಾಗತಿಸಿದರು. ವಿದ್ಯಾರಾಜ್ ಕಾಪಿಕಾಡ್ ಸನ್ಮಾನಪತ್ರ ವಾಚಿಸಿದರು. ವಿಶ್ವನಾಥ ಕುಲಾಲ್ ಹಾಗೂ ವಿನಯರಾಜ ಅಡ್ಯಾರ್ ಕಾರ್ಯಕ್ರಮಕ್ಕೆ ಸಹಕರಿಸಿದರು. ಉಪಾಧ್ಯಕ್ಷ ಸುರೇಶ್ ಕುಲಾಲ್ ಧನ್ಯವಾದ ಸಲ್ಲಿಸಿದರು. ನವೀನ್ ಚಾಪೆ ಮತ್ತು ಕು. ಗೌತಮಿ ಸುಜೀರ್ ಕಾರ್ಯಕ್ರಮ ನಿರೂಪಿಸಿದರು.


Leave a Comment