ಬೆಂಗಳೂರು: ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶ ಸಹಿತ ರಾಜ್ಯಾದ್ಯಂತ ಜೂ 20ರಿಂದ 24ರ ವರೆಗೆ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಳಗಾವಿ, ಬೆಂಗಳೂರು, ಬೀದರ್, ಹಾಸನ ಸಹಿತ ಹಲವೆಡೆ ಶನಿವಾರ ಉತ್ತಮ ಮಳೆಯಾಗಿದೆ. ಸೋಮವಾರದಿಂದ 5 ದಿನಗಳ ಕಾಲ ನಿರಂತರವಾಗಿ ಮಳೆ ಸುರಿಯುವ
ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನ ಮಳೆ ಬೀಳುವ ಸಾಧ್ಯತೆಗಳಿವೆ.
















