ಬಂಟ್ವಾಳ : ಭಾ ಜ ಪಾ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಹಾಗೂ ವಿಕಸಿತ ಭಾರತ ಸಂಕಲ್ಪ ಸಭೆ.

Coastal Bulletin
ಬಂಟ್ವಾಳ : ಭಾ ಜ ಪಾ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಹಾಗೂ ವಿಕಸಿತ ಭಾರತ ಸಂಕಲ್ಪ ಸಭೆ.

ಬಂಟ್ವಾಳ : ಭಾ ಜ ಪಾ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆ ಹಾಗೂ ವಿಕಸಿತ ಭಾರತ ಸಂಕಲ್ಪ ಸಭೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಜೂ. 19ರಂದು ಗುರುವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿ ಜೂನ್ 23 ರಂದು ರಾಜ್ಯ ಸರಕಾರದ ವಿರುದ್ಧ ಪ್ರತಿ ಪಂಚಾಯಿತಿಯಲ್ಲಿ ಹೋರಾಟ ನಡೆಯಲಿದೆ. ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಪ್ರಸ್ತುತ ದಿನಗಳಲ್ಲಿ ರಾಜ್ಯದಲ್ಲಿ ಸರಕಾರ ಆಡಳಿತ ಹದಗೆಟ್ಟಿದ್ದು, ಎಲ್ಲದಕ್ಕೂ ದುಪ್ಪಟ್ಟು ಟ್ಯಾಕ್ಸ್ ಹಾಕುವ ಮೂಲಕ ಗ್ಯಾರಂಟಿ ಜಾರಿಗೆ ಜನರಿಗೆ ಹೊರೆ ಹಾಕುತ್ತಿದ್ದಾರೆ. ಬಡವರ ಕಷ್ಟಗಳಿಗೆ ಸ್ಪಂದಿಸುವ ಕೆಲಸಗಳನ್ನು ಮಾಡುವ ಮೂಲಕ ಕಾರ್ಯಕರ್ತರು ಗಮನ ಸೆಳೆಯಬೇಕು. ನಮ್ಮ ಜಿಲ್ಲೆಯಲ್ಲಿ ಸುಮಾರು ಐವತ್ತು ಸಾವಿರದಷ್ಟು ಮಂದಿ ರಾಜ್ಯಸರಕಾರದ ಸೌಲಭ್ಯ ಕಡಿತದಿಂದ ವಂಚಿತರಾಗುತ್ತಿದ್ದಾರೆ. ಪಕ್ಷ ಅವರೊಂದಿಗೆ ನಿಲ್ಲಬೇಕು. ಪ್ರತಿಯೊಬ್ಬರೂ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಹೇಳಿದರು.

ಸತೀಶ್ ಕುಂಪಲ ಮಾತನಾಡಿ ಪಕ್ಷದ ಸಂಘಟನೆಯ ದೃಷ್ಟಿಯಿಂದ ನಾವೆಲ್ಲರೂ ಜೊತೆಯಾಗಬೇಕಾಗಿದೆ. ಪಕ್ಷ ನೀಡಿದ ಜವಬ್ದಾರಿಗಳನ್ನು ಪದಾಧಿಕಾರಿಗಳು ಶಕ್ತಿ ಮೀರಿ ಸಕ್ರೀಯವಾಗಿ ನಿರ್ವಹಿಸಬೇಕು, ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಕೆಲಸ ಮಾಡಿದಾಗ ಪಕ್ಷ ಬೆಳೆಯುತ್ತದೆ, ರಾಜ್ಯದಲ್ಲಿ

ವಸೂಲಿಬಾಜಿ ಸರಕಾರವಿದ್ದು,ಮಲಗಿರುವ ಸರಕಾರವನ್ನು ಎಬ್ಬಿಸುವ ಕೆಲಸ ಕಾರ್ಯಕರ್ತರಿಂದ ಆಗಬೇಕಾಗಿದೆ ಎಂದು ಅವರು ತಿಳಿಸಿದರು. ಎಂದು ಅವರು ತಿಳಿಸಿದರು. ಸ್ಥಳೀಯವಾಗಿ ಜನರೊಂದಿಗೆ ಬೆರೆತು ವಿಶ್ವಾಸಗಳಿಸಿಕೊಂಡು ಕೆಲಸ ಮಾಡಿದರೆ ಮಾತ್ರ ಪಕ್ಷದ ಜೊತೆ ಕಾರ್ಯಕರ್ತ ನಾಯಕನಾಗಿ ಬೆಳೆಯಲು ಸಾಧ್ಯವಾಗುತ್ತದೆ.

ಬಿಜೆಪಿ ಕ್ಷೇತ್ರಾಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಕಿಶೋರ್ ಕುಮಾರ್ ಪುತ್ಗೂರು, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪಕ್ಷ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಪೂಜಾ ಪೈ, ಅಭಿಯಾನದ ಜಿಲ್ಲೆ ಸಂಚಾಲಕ ಹರೀಶ್ ಕಂಜಿಪಿಲಿ, ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ರಾಕೇಶ್ ರೈ ಕಡೆಂಜಿ, ರೂಪಾ. ನಿತೇಶ್, ಮೋಹನ್ ಪಿ ಎಸ್, ವಿಜಯ ರೈ, ವಸಂತ ಅಣ್ಣಳಿಕೆ, ಬಾಲಕೃಷ್ಣ ಸೆರ್ಕಳ, ಪ್ರಭಾಕರ ಪ್ರಭು ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ ಸ್ವಾಗತಿಸಿದರು. ಶಿವಪ್ರಸಾದ್ ಶೆಟ್ಟಿ ವಂದಿಸಿದರು

Leave a Comment