ಬಂಟ್ವಾಳ : ಎಸ್ವಿಎಸ್ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ನಡೆದ ಎಸ್ ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಗೆ ಮೊದಲು ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆ ಸಿಬ್ಬಂದಿಗಳು ಪರೀಕ್ಷಿಸಿದರು.
ತಾಲ್ಲೂಕಿನ 30 ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ನಡೆದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗೆ ಒಟ್ಟು 6,156 ವಿದ್ಯಾರ್ಥಿಗಳ ಪೈಕಿ 6 ಮಂದಿ ಗೈರು ಹಾಜರಾಗಿ ಒಟ್ಟು 6,150 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡ್ ಮುನ್ನೆಚ್ಚರಿಕೆ ಕೈಗೊಂಡು ಮೊದಲ ದಿನದ ಮೂರು ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಆರಂಭದಲ್ಲಿ ವಿದ್ಯಾರ್ಥಿಗಳನ್ನು ಸರತಿ ಸಾಲಿನಲ್ಲಿ ನಿಲ್ಲಿಸಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಸಹಿತ
ಸ್ಕೌಟ್ಸ್ ಎಂಡ್ ಗೈಡ್ಸ್ ಸದಸ್ಯರು ಮಾಸ್ಕ್ ವಿತರಿಸಿ ಸ್ಯಾನಿಟೈಸ್ ಮತ್ತು ಆರೋಗ್ಯ ತಪಾಸಣೆ ಮಾಡಿದರು.
ವಗ್ಗ ಸರ್ಕಾರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರ ವಿಶೇಷವಾಗಿ ಅಲಂಕರಿಸಲಾಗಿತ್ತು. ಇಬ್ಬರು ಕೋವಿಡ್ ಸೋಂಕಿತ ವಿದ್ಯಾರ್ಥಿಗಳು ಆಂಬುಲೆನ್ಸ್ ನಲ್ಲಿ ಬಂದು ಬಿ.ಸಿ.ರೋಡಿನ ಆಶ್ರಮ ಶಾಲೆಯಲ್ಲಿ ಪರೀಕ್ಷೆ ಬರೆದರು.
ಕ್ಷ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ., ತಹಶೀಲ್ದಾರ್ ರಶ್ಮಿ ಎಸ್.ಆರ್., ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು.
















