ಮಂಗಳೂರು: ಸಾಹಿತಿ,ಪತ್ರಕರ್ತ ಉದಯ ಧರ್ಮಸ್ಥಳ (64) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.
ಧರ್ಮಸ್ಥಳದವರಾದ ಅವರು ಬೆಂಗಳೂರಿನ ಮಾರತಹಳ್ಳಿಯಲ್ಲಿ ನೆಲೆಸಿದ್ದರು. ಸನಾತನ ಸಾರಥಿ ಪತ್ರಿಕೆಯ ಸಂಪಾದಕರಾಗಿದ್ದ ಅವರು ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದ ಸಾಹಿತ್ಯ ಕೃಷಿಯಲ್ಲೂ ತೊಡಗಿಸಿಕೊಂಡಿದ್ದರು.
ತುಳು ಸಾಹಿತ್ಯ
ಅಕಾಡೆಮಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ತುಳುವನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದ ಹೋರಾಟದಲ್ಲೂ ಸಕ್ರಿಯರಾಗಿದ್ದರು.
ಅವರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.















