ಬಿ ಸಿ ರೋಡ್ :ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಆಚರಣೆ

Coastal Bulletin
ಬಿ ಸಿ ರೋಡ್ :ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಆಚರಣೆ

ಬಂಟ್ವಾಳ: ಯಾರನ್ನು ದ್ವೇಷ ಮಾಡದೆ ತಮ್ಮ ದಿಟ್ಟ ನಡೆಯ ಮೂಲಕ ಸಮಾಜದ ವ್ಯವಸ್ಥೆಯ ಲೋಪಗಳ ವಿರುದ್ದ ಹೋರಾಡಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಬಿಸಿರೋಡಿನ ಆಡಳಿತ ಸೌಧದ ಕಚೇರಿಯಲ್ಲಿ ತಾಲೂಕು ಮಟ್ಟದ ಬ್ರಹ್ಮ ಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಆಚರಣೆ ಕಾರ್ಯಕ್ರಮವನ್ನು ದೀಪಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಇಡೀ ಮನುಕುಲದ ಗುರು ನಾರಾಯಣ ಗುರುಗಳಾಗಿದ್ದು, ಅವರ ಆದರ್ಶಗಳು ನಮಗೆ ಮಾದರಿ ಎಂದರು. 

ನಾರಾಯಣ ಗುರುಗಳ ಸಂದೇಶ ನೀಡಿದ ಪತ್ರಕರ್ತ ಸಂದೀಪ್ ಸಾಲ್ಯಾನ್,ಸಾಮಾನ್ಯ ಬಡಕುಟುಂಬದಲ್ಲಿ ಹುಟ್ಟಿ ದೈವತ್ವಕ್ಕೆ ಏರಿದ ಮಹಾನ್ ಸಂತ ಬ್ರಹ್ಮಶ್ರೀನಾರಾಯಣ ಗುರುಗಳ ಆದರ್ಶ ಎಲ್ಲರಿಗೂ ದಾರಿದೀಪವಾಗಬೇಕು ಎಂದರು.

ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ.ಭಟ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್,ಬೂಡಾ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ

ಅಧ್ಯಕ್ಷ ಬಿ.ಸಂಜೀವ ಪೂಜಾರಿ,ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಶೈಲಜಾ ರಾಜೇಶ್, ಜಿಲ್ಲಾ ಮೂರ್ತೆದಾರರ ಸಹಕಾರ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ಯುವವಾಹಿನಿ ಅಧ್ಯಕ್ಷೆ ದಿನೇಶ್ ಸುವರ್ಣ ರಾಯಿ, ಬಿಲ್ಲವ ಸಂಘದ ಉಪಾಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿ ರಮೇಶ್ ಬಿ.ತುಂಬೆ,ಕೋಶಾಧಿಕಾರಿ ಆನಂದ ಸಾಲಿಯಾನ್ ,ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ, ಸಮಾಜ‌ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸುನೀತಾ, ನೋಂದಣಾಧಿಕಾರಿ ಕವಿತಾ, ಗ್ಯಾರಂಟಿ ಅನುಷ್ಠಾನ ಪಾ್ರಾಧಿಕಾರದ ಅಧ್ಯಕ್ಷೆ ಜಯಂತಿ ಪೂಜಾರಿ ಮತ್ತಿತರ ಪ್ರಮುಖರು ಹಾಜರಿದ್ದರು.

ಕಂದಾಯ ನಿರೀಕ್ಷಕ ಜನಾರ್ದನ ಸ್ವಾಗತಿಸಿದರು.ಉಪತಹಶೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.

Leave a Comment