ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ನವಚೇತನ ಕ್ರಿಕೆಟರ್ಸ್ (ಬಿಎನ್‌ಸಿ) ವತಿಯಿಂದ ಅ. 25ರಂದು ಭಾನುವಾರ ಪಂಬದಬೆಟ್ಟು ಬಿಎನ್‌ಸಿ ಕ್ರೀಡಾಂಗಣದಲ್ಲಿ ವಿವಿಧ ಧಾರ್ಮಿಕ ಹಾಗೂ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿವೆ.
ಅಂದು ಬೆಳಿಗ್ಗೆ 9.30ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು, ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕರ ಸೇವೆಗಾಗಿ ರೂಪಿಸಿರುವ ‘ಬಿಎನ್‌ಸಿ ಸೇವಾ ಸುರಕ್ಷಾ ಯೋಜನೆ’ ಹಾಗೂ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಮದ್ಯಾಹ್ನ ಅನ್ನಸಂತರ್ಪಣೆ
ಜರುಗಲಿದೆ.
ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವುದು ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಜನರಿಗೆ ನೆರವಾಗುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













