ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (ಡಿಸಿಸಿ) ಸಹಕಾರ ವಿಭಾಗದ ನೂತನ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಧುರೀಣ ಹಾಗೂ ಅನುಭವಿ ರಾಜಕಾರಣಿ ಸುದರ್ಶನ್ ಜೈನ್ ನೇಮಕಗೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಅನುಮೋದನೆಯ ಮೇರೆಗೆ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಾಧ್ಯಕ್ಷ ಧನರಾಜ್ ಎಸ್. ತಾಳಂಪಳ್ಳಿ ಅವರು ಗುರುವಾರ ಅಧಿಕೃತ ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಸುದರ್ಶನ್ ಜೈನ್ ಅವರು ಕಳೆದ ಮೂರು ದಶಕಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಸಹಕಾರಿ ಸಂಘಗಳ ಕಾರ್ಯವೈಖರಿ ಹಾಗೂ ರೈತರು ಮತ್ತು ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಉತ್ತಮ
ಅನುಭವ ಹೊಂದಿದ್ದಾರೆ.
ಇದಲ್ಲದೆ, ಅವರು ಈ ಹಿಂದೆ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಹಾಗೂ ಸತತ ಆರು ವರ್ಷಗಳ ಕಾಲ ಪಂಜಿಕಲ್ಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸ್ಥಳೀಯ ಆಡಳಿತ ಮತ್ತು ಸಹಕಾರಿ ಕ್ಷೇತ್ರದಲ್ಲಿನ ಅವರ ಅನುಭವವನ್ನು ಪರಿಗಣಿಸಿ ಈ ನೇಮಕಾತಿ ಮಾಡಲಾಗಿದ್ದು, ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರದ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿರೀಕ್ಷೆ ವ್ಯಕ್ತವಾಗಿದೆ.









