ಬಂಟ್ವಾಳ: ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಫೆ.8 ರಿಂದ 10 ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭಾನುವಾರ ಬಿಡುಗಡೆಗೊಳಿಸಿದರು.
ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ಅವರು ದೇವಳದಲ್ಲಿ ಕೈಗೊಂಡಿರುವ ಜೀರ್ಣೋದ್ಧಾರ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.
ಬ್ರಹ್ಮಕಲಶೋತ್ಸವ ಸಮಿತಿ
ಅಧ್ಯಕ್ಷ ಎಂ.ತುಂಗಪ್ಪ ಬಂಗೇರ, ಉಪಾಧ್ಯಕ್ಷ ಮಾಣಿಕ್ಯರಾಜ್ ಜೈನ್, ಪ್ರಧಾನ ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ, ಹೊರೆಕಾಣಿಕೆ ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ ಕುಂದರ್, ಕೋಶಾಧಿಕಾರಿ ಅಭಿಷೇಕ್ ಪಿಲಿಂಗಾಲು ಮತ್ತಿತರರು ಇದ್ದರು.














