Coastal Bulletin

ಬಂಟ್ವಾಳ : ತಾಲೂಕಿನಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ.

ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಕೊಮಾಕಿ ಕಂಪೆನಿಯ ಬ್ಯಾಟರಿ ಚಾಲಿತ ಸ್ಕೂಟರ್ ಗಳು ಇಲ್ಲಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಚ್ಚಿಕೊಂಡಿದೆಯಾ

ಎಂಬ ಸಂಶಯ ವ್ಯಕ್ತವಾಗಿದೆ.

ಸಾರ್ವಜನಿಕರು ಬೆಂಕಿಯನ್ನು ನೋಡಿ ಅಗ್ನಿಶಾಮಕ ದಳದವರಿಗೆ ಸಂಪರ್ಕ ಮಾಡಿದ್ದಾರೆ. ಸ್ಥಳ ಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಗಳು ಆಗಮಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡುತ್ತಿದ್ದಾರೆ. ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಸಹಿತ ಸಿಬ್ಬಂದಿ ಗಳು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಾರ್ವಜನಿಕ ರು ಕೈ ಜೋಡಿಸಿದ್ದಾರೆ.

Leave a Comment