ಬಂಟ್ವಾಳ: ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ.

Coastal Bulletin
ಬಂಟ್ವಾಳ: ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ.

ಬಂಟ್ವಾಳ :ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಪ್ರಚಾರ ಉಸ್ತುವಾರಿ,ಮಾಜಿ ಸಚಿವರಾದ ಬಿ.ರಮಾನಾಥ ರೈ ಯವರು ಜೊತೆಗಿದ್ದರು.ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ತಾಲೂಕು ತಾಲೂಕು ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ಪದ್ಮಶೇಖರ್ ಜೈನ್,ಅಶ್ವಿನ್ ಕುಮಾರ್ ರೈ,ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಬ್ಬಾಸ್ ಅಲಿ,ವಿನಾಯರಾಜ್,ಸುಭಾಶ್ಚಂದ್ರ ಶೆಟ್ಟಿ ಕುಳಾಲು ,ಮಾಜಿ ಎಪಿಎಂಸಿ ಅಧ್ಯಕ್ಷರಾದ ಪದ್ಮನಾಭ ರೈ,ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲವೀನಾ ವಿಲ್ಮಾ ಮೋರಸ್ ಹಾಗೂ ಜಯಂತಿ ವಿ ಪೂಜಾರಿ,ಪಾಣೆಮಂಗಳೂರು ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು, ಸಂಜೀವ ಪೂಜಾರಿ ಬಿರ್ವ,ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾ ವಿ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್, ಸುದರ್ಶನ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

Leave a Comment