ಬಂಟ್ವಾಳ: ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಪ್ರಯುಕ್ತ ಶುಕ್ರವಾರ ವ್ಯವಸ್ಥಾಪನಾ ಸಮಿತಿ ಹಾಗೂ ಬ್ರಹ್ಮಕಲಶ ಸಮಿತಿ ವತಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಯಶಸ್ಸಿಗಾಗಿ ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ, ಪೂಜ್ಯರ ಆಶೀರ್ವಾದವನ್ನು ಪಡೆದು ಕಾರ್ಯಕ್ರಮಕ್ಕೆ ಆಮಂತ್ರಿಸಲಾಯಿತು. ಬಳಿಕ ದೇವಸ್ಥಾನದಲ್ಲಿ ನಡೆಯುತ್ತಿರುವ ಅಗತ್ಯ ಜೀರ್ಣೋದ್ಧಾರ ಕಾರ್ಯಗಳನ್ನು ಪೂಜ್ಯರಿಗೆ ವಿವರಿಸಿ ಶ್ರೀಕ್ಷೇತ್ರದಿಂದ ಸಹಕಾರವನ್ನು ಕೋರಿ ಮನವಿ ಸಲ್ಲಿಸಲಾಯಿತು. ಜೀರ್ಣೋದ್ಧಾರ ಕಾರ್ಯದ ಜೊತೆಗೆ ಗೋಶಾಲೆ ನಿರ್ಮಾಣಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ
ಪೂಜ್ಯರು ಕ್ಷೇತ್ರದ ವತಿಯಿಂದ ಸಹಕಾರದ ಭರವಸೆಯನ್ನು ನೀಡಿ ಆಶೀರ್ವದಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು.
ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ರಂಗೋಲಿ, ಗೌರವಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮುಂಡಾಜೆಗುತ್ತು, ಸಂಚಾಲಕ ತೇವು ತಾರನಾಥ ಕೊಟ್ಟಾರಿ, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ದಾಮೋದರ ನೆತ್ತರಕೆರೆ, ವ್ಯವಸ್ಥಾಪನಾ ಸಮಿತಿ ಸದಸ್ಯ ಪುರುಷೋತ್ತಮ ಕೊಟ್ಟಾರಿ ಮಾಡಂಗೆ ಉಪಸ್ಥಿತರಿದ್ದರು.














