Coastal Bulletin

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದಾರೆ.

ಎನ್​ಐಎ ಅಧಿಕಾರಿಗಳು ಶುಕ್ರವಾರ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಸುದೀರ್ಘ 1500 ಪುಟಗಳ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. 240 ಸಾಕ್ಷಿಗಳ ಹೇಳಿಕೆಗಳು ಸೇರಿ ಒಟ್ಟು 20 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಇನ್ನು ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ

ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ತಲೆಮರೆಸಿಕೊಂಡಿರುವ 6 ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿರುವ ಎನ್​ಐಎ ಅಧಿಕಾರಿಗಳು, ಪತ್ತೆಯಾಗದ ಹಿನ್ನಲೆಯಲ್ಲಿ ಲುಕ್​ಔಟ್​ ನೋಟಿಸ್ ಜಾರಿ ಮಾಡಿದೆ. ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

Leave a Comment