Coastal Bulletin

ಈಗಾಗಲೇ ಟರ್ಕಿ-ಸಿರಿಯಾದಲ್ಲಿ ಸಂಭವಿಸಿದ 3 ಭೂಕಂಪದಿಂದಾಗಿ 45 ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ರಕ್ಷಣಾ ಕಾರ್ಯ ಇನ್ನೂ ಪ್ರಗತಿಯಲ್ಲಿದೆ. ಇಂತಃ ಪರಿಸ್ಥಿತಿಯಲ್ಲಿ ಟರ್ಕಿ-ಸಿರಿಯಾ ಗಡಿಯಲ್ಲಿ 6.4 ಹಾಗೂ 5.8 ತೀವ್ರತೆಯ 2 ಭೂಕಂಪಗಳು ಸಂಭವಿಸಿದ್ದು, ಹಲವು ಮಂದಿ ಮೃತಪಟ್ಟಿದ್ದು, 200ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಟರ್ಕಿ ಮತ್ತು ಸಿರಿಯಾಗಳಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 46,002ಕ್ಕೆ ಏರಿಕೆಯಾಗಿದೆ. ಈ ಪೈಕಿ ಟರ್ಕಿಯಲ್ಲಿ 40,402 ಹಾಗೂ ಸಿರಿಯಾದಲ್ಲಿ 5,800 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿದೆ. 7.8 ತೀವ್ರತೆಯ ಭೂಕಂಪಕ್ಕೆ ಟರ್ಕಿಯಲ್ಲಿ 5 ಲಕ್ಷ ಕಟ್ಟಡಗಳು ನೆಲಸಮವಾಗಿದ್ದು, ಸಾಕಷ್ಟು ಮಂದಿ ಕಾಣೆಯಾಗಿದ್ದಾರೆ

ಎನ್ನಲಾಗಿದೆ. ಈ ನಡುವೆ ಉರುಳಿದ ಕಟ್ಟಡಗಳ ಅಡಿಯಿಂದ ಜನರ ರಕ್ಷಣಾ ಕಾರ್ಯಚರಣೆ ಭಾನುವಾರ ಬಹುತೇಕ ಅಂತ್ಯಗೊಂಡಿತ್ತು. ಈ ನಡುವೆ ಟರ್ಕಿಗೆ ರಕ್ಷಣಾ ಕಾರ್ಯಾಚರಣೆಗೆ ತೆರಳಿದ್ದ ಎನ್‌ಡಿಆರ್‌ಎಫ್‌ನ ಮೂರೂ ತಂಡಗಳು ತಮ್ಮ ಕಾರ್ಯಾಚರಣೆ ಮುಗಿಸಿ ಭಾನುವಾರ ಭಾರತಕ್ಕೆ ಮರಳಿತ್ತು.

ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಂತೆ, ಭೂಕಂಪ ಪೀಡಿತ ಪ್ರದೇಶಗಳಲ್ಲಿ ಸೋಂಕಿನ ಸಂಭವನೀಯ ಹರಡುವಿಕೆಯ ಬಗ್ಗೆ ಕಳವಳಗಳು ಹೆಚ್ಚುತ್ತಿವೆ.


Leave a Comment