ಬಂಟ್ವಾಳ :ಶ್ರೀ ರಕ್ತೇಶ್ವರಿ ಯುವಕ ಸಂಘ ನೇರಂಬೋಳು ಇದರ ವತಿಯಿಂದ ಮೇ 19ರಂದು ಆದಿತ್ಯವಾರ ಪುಸ್ತಕ ವಿತರಣೆ ಕಾರ್ಯಕ್ರಮವು ಸಂಘದ ಸಭಾಂಗಣದಲ್ಲಿ ನಡೆಯಿತು.
ಸ್ಥಳೀಯರಾದ ರಾಜೀವ ಸಾಲಿಯಾನ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು ಸಂಘದ ಅಧ್ಯಕ್ಷ ಹರೀಶ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಮನೋಹರ್ ಕುಲಾಲ್ ನೆರಂಬೋಳು ನಿಕಟ ಪೂರ್ವ ಅಧ್ಯಕ್ಷ ಹರಿಶ್ಚಂದ್ರ ಪೂಜಾರಿ ಸಾಂಸ್ಕೃತಿಕ ಕಾರ್ಯದರ್ಶಿ
ಗಣೇಶ್ ಪೂಜಾರಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಸುಮಾರು 73 ಮಂದಿಗೆ ಪುಸ್ತಕ ವಿತರಣೆ ಮಾಡಲಾಯಿತು ಓರ್ವ ವಿದ್ಯಾರ್ಥಿಯ ಒಂದರಿಂದ ಹತ್ತನೇ ತರಗತಿಯ ಶಾಲೆಯ ಸಂಪೂರ್ಣ ಖರ್ಚು ವೆಚ್ಚಗಳನ್ನು ಬರಿಸಲಾಯಿತು ರವೀಂದ್ರ ಮೂಲ್ಯ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದ ವಿತ್ತರು .









