ಬಂಟ್ವಾಳ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಳೆದ 7 ವರ್ಷಗಳ ಹಿಂದೆ ಬಿ.ಸಿ.ರೋಡಿನಲ್ಲೇ ಶಿಲಾನ್ಯಾಸ ನೆರವೇರಿಸಿದ್ದ ರೂ 20 ಕೋಟಿ ವೆಚ್ಚದ ಕಡೇಶ್ವಾಲ್ಯ-ಅಜಿಲಮೊಗರು ಸಂಪರ್ಕಿಸುವ 'ಸೌಹಾರ್ದ ಸೇತುವೆ' ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪ್ರಸಕ್ತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಡಳಿತಾವಧಿಯಲ್ಲೇ ಲೋಕಾರ್ಪಣೆಗೊಳ್ಳಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಕಡೇಶ್ವಾಲ್ಯ-ಅಜಿಲಮೊಗರು ಸೌಹಾರ್ದ ಸೇತುವೆ ಕಾಮಗಾರಿಯನ್ನು ಬುಧವಾರ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಇಲ್ಲಿನ ಕಡೇಶ್ವಾಲ್ಯ ಮತ್ತು ಮಣಿನಾಲ್ಕೂರು ಗ್ರಾಮಗಳಿಗೆ ಕೊಂಡಿಯಾಗುದರ ಜೊತೆಗೆ ಪ್ರಸಿದ್ಧ ಕಡೇಶ್ವಾಲ್ಯ ಲಕ್ಷ್ಮೀ ನರಸಿಂಹ ದೇವಾಲಯ ಮತ್ತು ಅಜಿಲ ಮೊಗರು ಬಾಬಾ ಫಕ್ರುದ್ದೀನ್ ದರ್ಗಾ ಪರಸ್ಪರ ಸಂಬಂಧ ಬೆಸೆಯುವ ಮೂಲಕ 'ಸೌಹಾರ್ದ ಸೇತುವೆ'ಯಾಗಿ ಮೂಡಿ ಬಂದಿದೆ. ಈಗಾಗಲೇ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಉದ್ಘಾಟನೆಗೆ ಶೀಘ್ರವೇ ದಿನ ನಿಗದಿಗೊಳಿಸುವುದಾಗಿ ಹೇಳಿದ್ದಾರೆ ಎಂದರು.
ಈ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಡಳಿತಾವಧಿಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ 5 ಸಾವಿರ ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಶಿಲಾನ್ಯಾಸ ಮತ್ತು ಉದ್ಘಾಟನೆಗೊಂಡಿದ್ದು, ಆ ಬಳಿಕ ನಾನು
ಪರಾಭವಗೊಂಡು ಸಕರ್ಾರವೂ ಬೇರೆ ಬಂತು. ಇದೀಗ ಮತ್ತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಡಳಿತಾವಧಿಯಲ್ಲಿ ಬಾಕಿ ಉಳಿದಿರುವ ಪಂಜೆ ಮಂಗೇಶರಾಯ ಭವನ ಮತ್ತು ಕ್ರೀಡಾಂಗಣ ಮತ್ತಿತರ ಕನಸಿನ ಯೋಜನೆಗಳನ್ನು ಪೂರ್ಣಗೊಳಿಸಲು ಶ್ರಮಿಸುವುದಾಗಿ ಅವರು ತಿಳಿಸಿದರು.
ಬೀಜ ಮತ್ತು ಸಾವಯವ ಪ್ರಮಾಣೀಕರಣ ನಿಗಮ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಬುಡಾ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಪ್ರಮುಖರಾದ ಸುದೀಪ್ ಕುಮಾರ್ ಶೆಟ್ಟಿ, ಪದ್ಮಶೇಖರ್ ಜೈನ್, ಅಬ್ಬಾಸ್ ಆಲಿ, ಸಂಪತ್ ಕುಮಾರ್ ಶೆಟ್ಟಿ, ಶಿವಪ್ಪ ಪೂಜಾರಿ ಹಟದಡ್ಕ, ಕಾಂಚಲಾಕ್ಷಿ, ಸಂಜೀವ ಪೂಜಾರಿ, ಪೂವಪ್ಪ ಪೂಜಾರಿ, ಈಶ್ವರ ಪೂಜಾರಿ, ಆದಂ ಕುಂಞ, ಸುರೇಶ್ ಜೋರಾ, ಚಿದಾನಂದ ಕಡೇಶ್ವಾಲ್ಯ, ಹರಿಶ್ಚಂದ್ರ ಕಡೇಶ್ವಾಲ್ಯ, ಯೂಸುಫ್ ಕರಂದಾಡಿ ಮತ್ತಿತರರು ಇದ್ದರು.















