ಬಂಟ್ವಾಳ :ಗ್ರಾಮಾಂತರ ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ.

Coastal Bulletin
ಬಂಟ್ವಾಳ :ಗ್ರಾಮಾಂತರ ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ.

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಉತ್ತರಕನ್ನಡ ನಿವಾಸಿ ಕೀರಪ್ಪ (54) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ನಡೆದಿದೆ.

ಅವರು ಶಿರಸಿ ಠಾಣೆಯಿಂದ ಕಳೆದ 5 ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಬಡ್ತಿ ಹೊಂದಿ ವರ್ಗಾವಣೆಗೊಂಡಿದ್ದರು. ಇವರ ಕುಟುಂಬ ಸದಸ್ಯರು ಉತ್ತರ ಕನ್ನಡದಲ್ಲೇ ಇದ್ದು, ಇವರು ಒಬ್ಬರೇ ಇಲ್ಲಿ ಇದ್ದರು. ಬಂಟ್ವಾಳ ಪೇಟೆಯಲ್ಲಿರುವ ಚಿನ್ನದ ಉದ್ಯಮಿಯೋರ್ವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು.

ಬೆಳಿಗ್ಗೆಯಿಂದ ಕರ್ತವ್ಯ ಕ್ಕೆ ಹಾಜರಾಗದೆ ಇದ್ದ ಸಬ್ ಇನ್ಸ್ ಪೆಕ್ಟರ್ ಅವರು ಪೋನ್ ಕಾಲ್ ಕೂಡ

ರಿಸೀವ್ ಮಾಡದೆ ಇದ್ದ ಕಾರಣದಿಂದ ಸಂಶಯಗೊಂಡ ಪೋಲೀಸರು ಇಂದು ಸಂಜೆ ವೇಳೆ ಅವರು ವಾಸಿಸುವ ಬಾಡಿಗೆ ಮನೆಗೆ ಹೋಗಿ‌ ನೋಡಿದಾಗ ಬೀಗ ಹಾಕಿದ ಸ್ಥಿತಿಯಲ್ಲಿ ಇತ್ತು ಕರೆದಾಗ ಯಾವುದೇ ಸ್ಪಂದನೆ ನೀಡದೆ ಇದ್ದಾಗ , ಕಿಟಕಿಯಲ್ಲಿ ನೋಡಿದಾಗ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.

ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆಡಿಸನಲ್ ಎಸ್.ಪಿ. ಬೇಟಿ ನೀಡಿದ್ದಾರೆ

Leave a Comment