ಪುತ್ತೂರು :ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪ್ರದಾನ.

Coastal Bulletin
ಪುತ್ತೂರು :ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪ್ರದಾನ.

ಪುತ್ತೂರು:ಸುದೀರ್ಘ 69 ವರ್ಷಗಳ ಇತಿಹಾಸ ಹೊಂದಿರುವ, ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆಯ ಅಭಿವೃದ್ಧಿಗಾಗಿ ಸಹಕಾರಿ ಕ್ಷೇತ್ರದಲ್ಲಿ ತನ್ನ ಕಾರ್ಯ ಯೋಜನೆಯನ್ನು ರೂಪಿಸಿ ಬೆಳೆಸುತ್ತಿರುವ ಕುಂಬಾರರ ಗುಡಿ ಕೈಗರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಮಂಗಳೂರುನಲ್ಲಿ ನಡೆದ 73ನೇ ಸಹಕಾರಿ ಸಪ್ತಾಹದಲ್ಲಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸಹಕಾರ ಮಹಾ ಮಂಡಲದ ಅಧ್ಯಕ್ಷ ಜಿ.ಟಿ.ದೇವೆಗೌಡ, ಸಹಕಾರಿ ಸಚಿವ ಲಕ್ಷ್ಮಣ ಸವದಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಳ್ಕೊಟ್ಟು ಸಹಿತ ಹಲವು ಗಣ್ಯರು

ಉಪಸ್ಥಿತರಿದ್ದರು.ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ್ ಪೆರುವಾಯಿ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ದಾಮೋದರ್ ಕುಲಾಲ್, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಮೂಲ್ಯ ಸಹಕಾರ ಸಂಘದ ನಿರ್ದೇಶಕರಾದ ಶ್ರೀ ಶೇಸಪ್ಪ ಕುಲಾಲ್ ಗಣೇಶ್ ಕುಲಾಲ್ ಪ್ರಶಾಂತ್ ಪಂಜನ್ ಶ್ರೀಮತಿ ರಂಜಿತಾ ಮನೋಜ್ ಕುಲಾಲ್ ಉಪಸ್ಥಿತರಿದ್ದರು

Leave a Comment