ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ರಾಜ್ಯ ಮಟ್ಟದ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ..

Coastal Bulletin
ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ರಾಜ್ಯ ಮಟ್ಟದ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ..

ಬಂಟ್ವಾಳ: 29 ವರ್ಷಗಳ ಇತಿಹಾಸ ಹೊಂದಿರುವ ಹಾಗೂ ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಕಾರ್ಯಯೋಜನೆಗಳ ಮೂಲಕ ಬೆಳವಣಿಗೆ ಸಾಧಿಸುತ್ತಿರುವ ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದೆ.

ಶುಕ್ರವಾರ ಮಂಗಳೂರಿನಲ್ಲಿ ನಡೆದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆಯ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಸತತ 7ವರುಷಗಳಿಂದ  ಅಧ್ಯಕ್ಷರಾಗಿ ಸೊಸೈಟಿಯನ್ನು ಸಾಧನೆಯತ್ತ ಮುನ್ನಡೆಸುತ್ತಿರುವ ಜೀವನ್ ಲಾಯ್ಡ್ ಪಿಂಟೊ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷ ರೋನಾಲ್ಡ್ ವಿಜಯ್ ಫೆರ್ನಾಂಡಿಸ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇಲಿನ್ ಗ್ರೇಸಿ ಡಿಸೋಜ, ನಿರ್ದೇಶಕರಾದ ವಲೇರಿಯನ್ ಬರೇಟೊ, ಅನಿಲ್ ಹೆರಾಲ್ಡ್ ಫ್ರಾಂಕ್, ಲಾಡ್ರಿ ಮಿನೇಜಸ್, ಗ್ಲೋರಿಯಾ ಪ್ರೀಮಾ ಕುಟಿನ್ಹೊ, ವಿನ್ಸೆಂಟ್ ಕ್ಲೋಡಿ ಕಾರ್ಲೊ, ಲಾರೆನ್ಸ್ ಕ್ಲಿಫರ್ಡ್ ಡಿಸೋಜ, ಫ್ರಾನ್ಸಿಸ್ ಮೆಂಡೋನ್ಸ, ಹಿಲಾರಿ ಕ್ರಾಸ್ತಾ, ಹ್ಯೂಬರ್ಟ್ ಲೋಬೊ, ಅನಿತಾ

ನೊರೊನ್ಹಾ, ಬೆನೆಡಿಕ್ಟಾ ಸಲ್ಡಾನ್ಹಾ, ವಿಶಾಲ್ ಡಿಸೋಜ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರಾಜ್ಯದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಯಶ್‌ಪಾಲ್ ಎ. ಸುವರ್ಣ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Leave a Comment