ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಬಳಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ವತಿಯಿಂದ ಸೋಮವಾರ ಸಂಜೆ ಪ್ರತಿಭಟನೆ ನಡೆಸಿ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಘಟನೆಯ ಹಿಂದಿರುವ ಸಮಾಜದ್ರೋಹಿ ಶಕ್ತಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನೆಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಸರಪಾಡಿ ಅಶೋಕ ಶೆಟ್ಟಿ, ಗುರುರಾಜ್ ಬಂಟ್ವಾಳ್,
ಭರತ್ ಕುಮ್ಡೇಲು, ಸುರೇಶ್ ಬೆಂಜನಪದವು, ಸಂತೋಷ್, ಶಿವಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.














