ಬಂಟ್ವಾಳ :ಉಡುಪಿ ಪ್ರಾದೇಶಿಕ ಕಚೇರಿ ವ್ಯಾಪ್ತಿಯ. ದಕ್ಷಿಣ ಕನ್ನಡ ಒಂದು ಜಿಲ್ಲಾ ವ್ಯಾಪ್ತಿಯ ಜನಜಾಗೃತಿ ವೇದಿಕೆಯ ಜಿಲ್ಲಾ ವೇದಿಕೆ ಸಭೆಯು ಬಂಟ್ವಾಳದ ಜಿಲ್ಲಾ ಯೋಜನಾ ಕಚೇರಿಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಸ್ಥಾಪಕ ಅಧ್ಯಕ್ಷರಾದ ಶ್ರೀ ವಸಂತ ಸಾಲ್ಯಾನ್ ದೀಪ ಬೆಳಗಿಸಿ ಚಾಲನೆ ನೀಡಿದರು.
ವೇದಿಕೆಯಲ್ಲಿ ಜಿಲ್ಲಾಧ್ಯಕ್ಷರಾದ ಎನ್ಎ ರಾಮಚಂದ್ರ. ನಿಕಟ ಪೂರ್ವ ಅಧ್ಯಕ್ಷರಾದ ಮಹಮ್ಮದ್ ಇಸ್ಮಾಯಿಲ್. ಸಾಜ ರಾಧಾಕೃಷ್ಣ ಅಲ್ವಾ. ಜನಜಾಗೃತಿ ಪ್ರದೇಶಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್. ಜಿಲ್ಲಾ ನಿರ್ದೇಶಕರಾದ ಶ್ರೀ ಸತೀಶ್ ಶೆಟ್ಟಿ ಮತ್ತು ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಸ್ತುತ ವರ್ಷದಲ್ಲಿ ಜನಜಾಗೃತಿ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಚರ್ಚೆ ನಡೆಯಿತು. ಮತ್ತು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮಗಳ ವರದಿಯನ್ನು ಪಡೆಯಲಾಯಿತು.
ಕೊನೆಗೆ ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಪುತ್ತೂರಿನ ಶ್ರೀ ಪದ್ಮನಾಭ ಶೆಟ್ಟಿ ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಶ್ರೀಮತಿ ಶಾರದಾ ರೈ ಆಯ್ಕೆಯಾಗಿರುತ್ತಾರೆ. ಸಭೆಯಲ್ಲಿ ಎರಡು ಜಿಲ್ಲೆಗಳ ಅಧ್ಯಕ್ಷರು ಮತ್ತು ಮಾಜಿ ಅಧ್ಯಕ್ಷರುಗಳು. ಎರಡು ಜಿಲ್ಲೆಗಳ ಯೋಜನಾಧಿಕಾರಿಗಳು ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಿರುತ್ತಾರೆ. ಕ್ರಿಯಾಯೋಜನೆಯಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಉತ್ತಮ ರೀತಿಯಲ್ಲಿ ನಡೆಸುವ ಕುರಿತು ತಿಳಿಸಲಾಯಿತು














