ಬಂಟ್ವಾಳ :ಫೆ. 21 ರಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ -2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಚೆನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಚೆಕಛೇರಿ ವಾಮದಪದವು ಅಂಗನವಾಡಿಯಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಪ್ರೇರೇಪಣಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.
ಈ ತರಭೇತಿಯಲ್ಲಿ ಸ್ತ್ರೀಶಕ್ತಿ ಸ್ವ ಸಹಾಯ ಸಂಘದ ಸದಸ್ಯರು,ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿ ಒಟ್ಟು 52 ಮಂದಿ ಭಾಗವಹಿಸಿದ್ದರು. ಜಲ ಜೀವನ್ ಮಿಷನ್ ನ ಅನುಷ್ಠಾನ ಬೆಂಬಲ ಸಂಸ್ಥೆಯ ಸಿಬ್ಬಂದಿ
ಗುಣವತಿಯವರು ಜಲ ಜೀವನ್ ಮಿಷನ್ ಯೋಜನೆಯ ಬಗ್ಗೆ,.ಮಳೆ ನೀರು ಕೊಯ್ಲು ಘಟಕ ಮತ್ತು ಬೂದುನೀರು ನಿರ್ವಹಣೆಯ ಬಗ್ಗೆ ಮಾಹಿತಿಯನ್ನು ನೀಡಿ, ಸಮುದಾಯ ಇಂಗು ಗುಂಡಿ,ಟ್ವಿನ್ ಫಿಟ್ ಗೆ ಪಂಚಾಯತ್ ಮಟ್ಟದಲ್ಲಿ ಸಿಗುವ ಸವಲತ್ತು ಗಳ ಬಗ್ಗೆ ತಿಳಿಸಿದರು.














