ಕುಕ್ಕೆ ಸುಬ್ರಹ್ಮಣ್ಯ: ಇಲ್ಲಿನ ಕೆ ಎಸ್ ಅರ್ ಟಿ ಸಿ ಬಸ್ಸು ನಿಲ್ದಾಣದಲ್ಲಿ ಗುಣಮಟ್ಟದ ಸೇವೆ ಒದಗಿಸುತ್ತಿರುವ ಹೋಟೆಲ್ ಹಿಮಾನಿ ಪ್ಯೂರ್ ವೆಜ್ ರೆಸ್ಟೋರೆಂಟ್ ಗೆ ಮಾಜಿ ಸಾರಿಗೆ ಸಚಿವರಾದ ಬಿ ರಮಾನಾಥ ರೈ ಯವರು ಭೇಟಿ ನೀಡಿ ಶುಭ ಹಾರೈಸಿದರು.
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುಬ್ರಮಣ್ಯಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ರೈ ಯವರು ಹೋಟೆಲ್ ಗೆ ಭೇಟಿ ನೀಡಿ ಗುಣಮಟ್ಟದ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ಪಾಲುದಾರರಾದ ರೋಶನ್ ರೈ
ಪಚಿನಡ್ಕ ಮಾಜಿ ಸಚಿವರನ್ನು ಶಾಲು ಹೊದಿಸಿ ಗೌರವಿಸಿದರು,ಪ್ರಮುಖರಾದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಶೆಟ್ಟಿ,ಅಶೋಕ್ ನೆಕ್ರಾಜೆ, ಹರೀಶ್ ಇಂಜಾಡಿ, ಶಿವರಾಮ್ ರೈ ನಿತ್ಯಾನಂದ ಮುಂದೋಡಿ, ಕಿಶೋರ್ ಆರಂಪಾಡಿ ಮತ್ತಿತರರು ಉಪಸ್ಥಿತರಿದ್ದರು.









