ಬಂಟ್ವಾಳ : ತಾಲೂಕಿನ ಫರಂಗಿಪೇಟೆ ರಾ.ಹೆ. 75ರ 10ನೇ ಮೈಲುಗಲ್ಲು ಬಳಿ ಅಪರಿಚಿತ ಕಾರು ಢಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತಪಟ್ಟ ಘಟನೆ ಮಾ. 21ರಂದು ಶುಕ್ರವಾರ ರಾತ್ರಿ ಸಂಭವಿಸಿದೆ.
ಸ್ಥಳೀಯ ನಿವಾಸಿ ವಸಂತಿ ಶೆಟ್ಟಿ(52) ಮೃತಪಟ್ಟವರು. ಅಪಘಾತ ಎಸಗಿದ ಕಾರು ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಕಾರು ಢಿಕ್ಕಿ ಹೊಡೆದು ಮಹಿಳೆ ದೂರಕ್ಕೆ ಎಸೆಯಲ್ಪಟ್ಟಿರುವ ದೃಶ್ಯ
ಸಿಸಿ ಕೆಮರಾದಲ್ಲಿ ದಾಖಲಾಗಿದೆ.ಅತೀ ವೇಗದಿಂದ ಬಂದ ಕಾರು ಡಿಕ್ಕಿಯಾಗಿದೆ ಅಜಾಗರೂಕತೆಯ ಚಾಲನೆಯೇ ಈ ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















