ಮಂಗಳೂರು :ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲದ ನೂತನ ಉಪಾಧ್ಯಕ್ಷರಾಗಿ ಪ್ರದೀಪ್ ಅತ್ತವರ ಆಯ್ಕೆಯಾಗಿದ್ದಾರೆ.
ಇವರು ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವವನ್ನು ಮೈಗೂಡಿಸಿಕೊಂಡು, ಬೇರೆ ಬೇರೆ ಸಂಘ ಸಂಸ್ಥೆಗಳಲ್ಲಿ ಸಾಮಾಜಿಕವಾಗಿ ಧಾರ್ಮಿಕವಾಗಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಾರೆ.
ಉತ್ತಮ ಸಂಘಟಕ, ವಾಗ್ಮಿ, ಯುವಕರ ಕಣ್ಮಣಿ, ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಕುಲಾಲ ಮಾತೃ ಸಂಘದ ಸೇವಾದಳಪತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.














