ಬರಿಮಾರು :ಶಾಲಾ ಬಸ್ಸಿಗೆ ಮರ ಬಿದ್ದು ಓರ್ವ ವಿದ್ಯಾರ್ಥಿನಿ ಮೃತ್ಯು, ಇಬ್ಬರಿಗೆ ಗಾಯ.

Coastal Bulletin
ಬರಿಮಾರು :ಶಾಲಾ ಬಸ್ಸಿಗೆ ಮರ ಬಿದ್ದು ಓರ್ವ ವಿದ್ಯಾರ್ಥಿನಿ ಮೃತ್ಯು, ಇಬ್ಬರಿಗೆ ಗಾಯ.

ಬಂಟ್ವಾಳ: ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಕಲ್ಲೇಟಿ ಎಂಬಲ್ಲಿನ ಶ್ರೀ ಕಾನಲ್ತಾಯ ದೈವಸ್ಥಾನದ ಬದಿಯ ಮರವೊಂದು ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಬಿದ್ದು, ಕಲ್ಲಡ್ಕ ಶ್ರೀರಾಮ ಶಾಲೆಯ ಸುಮಾರು 6 ವರ್ಷ ಪ್ರಾಯದ ಚಿರಣ್ವಿ ಎಂಬ ಹೆಣ್ಣು ಮಗು ಮೃತ ಪಟ್ಟು,ಇಬ್ಬರು ಮಕ್ಕಳು ಗಾಯಗೊಂಡಿರುವುದಾಗಿ ತಿಳಿದುಬಂದಿದ್ದು, ಮಕ್ಕಳನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುತ್ತದೆ

ಸಂಜೆ ವೇಳೆ ಗಾಳಿ-ಮಳೆಯ ರಭಸಕ್ಕೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ದಿಢೀರನೆ ಬಸ್‌ನ ಮೇಲೆ ಬಿದ್ದಿದೆ. ಪರಿಣಾಮ ಬಸ್‌ನ ಮುಂಭಾಗ ಮತ್ತು ಮೇಲ್ಪಾವಣಿ ಸಂಪೂರ್ಣ ಜಜ್ಜುಗುಜ್ಜಾಗಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಬಸ್‌ನಲ್ಲಿದ್ದ ಮಕ್ಕಳನ್ನು ಹೊರತೆಗೆದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ದುರ್ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ ಕೆಲವರಿಗೆ

ಗಂಭೀರ ಗಾಯಗಳಾಗಿರುವ ಮಾಹಿತಿ ಲಭ್ಯವಾಗಿದೆ. ಗಾಯಾಳು ಮಕ್ಕಳನ್ನು ಸ್ಥಳೀಯರ ನೆರವಿನಿಂದ ತಕ್ಷಣವೇ ಪುತ್ತೂರು ಹಾಗೂ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಪಘಾತದ ನಿಖರ ಕಾರಣ, ಗಾಯಾಳುಗಳ ಸಂಖ್ಯೆ ಹಾಗೂ ಅವರ ಆರೋಗ್ಯ ಸ್ಥಿತಿಯ ಕುರಿತು ಪೊಲೀಸ್ ಇಲಾಖೆಯಿಂದ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ 

Leave a Comment