Coastal Bulletin

ಬಂಟ್ವಾಳ: ಪ್ರತಿ ತಾಲೂಕಿನಲ್ಲಿ ರೈತರ ಉತ್ಪಾದಕರ ಸಂಸ್ಥೆ (ಎಫ್‌.ಪಿ.ಒ.) ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬಂಟ್ವಾಳ ಪ್ರವಾಸಿ ಮಂದಿರಕ್ಕೆ ಭಾನುವಾರ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು.ಇದೇ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭಗವದ್ಗೀತೆ ಮತ್ತು‌ ಕಿಯೋನಿಕ್ಸ್ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ ಅವರು ಕೋಟಿ-ಚೆನ್ನಯರ ಚರಿತ್ರೆ ಪುಸ್ತಕ ನೀಡಿ ಬಳಿಕ ರಕ್ಷಾಬಂಧನ ಆಚರಿಸಿಕೊಂಡರು.

 ನಗರ ನೀರು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನಾ ಜಿ.ಕೆ ಭಟ್, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಬೂಡ

ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಬಿ. ಅರಳ, ರವೀಶ್ ಶೆಟ್ಟಿ ಕರ್ಕಳ, ಪ್ರಮುಖರಾದ ರಮಾನಾಥ ರಾಯಿ, ಚಿದಾನಂದ ರೈ ಕಕ್ಯಪದವು, ಗಣೇಶ್ ರೈ ಮಾಣಿ, ಸುದರ್ಶನ್ ಬಜ, ಪುರುಷೋತ್ತಮ ಶೆಟ್ಟಿ ವಾಮದಪದವು, ನಂದರಾಮ ರೈ, ಆನಂದ ಶಂಭೂರು, ಪ್ರಕಾಶ್ ಅಂಚನ್ ಮತ್ತಿತರರು ಉಪಸ್ಥಿತರಿದ್ದರು.






 

Leave a Comment