ಅಮ್ಮುಂಜೆ: ಸೆ.27ರಂದು ಉಚಿತ ವೈದ್ಯಕೀಯ ಶಿಬಿರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ.

Coastal Bulletin
ಅಮ್ಮುಂಜೆ: ಸೆ.27ರಂದು ಉಚಿತ ವೈದ್ಯಕೀಯ ಶಿಬಿರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ.

ಬಂಟ್ವಾಳ :ವೀರ ಯೋಧ ಯಾಧವ ಫ್ರೆಂಡ್ಸ್ (ರಿ.) ಅಮ್ಮುಂಜೆ ವೀರ ಯೋಧ ಯಾಧವ ಫ್ರೆಂಡ್ಸ್ ಮಹಿಳಾ ಘಟಕ, ಅಮ್ಮುಂಜೆ ಇದರ ಆಶ್ರಯದಲ್ಲಿ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್ ಅಂಡ್ ರಿಸರ್ಚ್ ಸೆಂಟರ್ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಸೆ.27ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9ರಿಂದ ಮಧ್ಯಾಹ್ನ ಗಂಟೆ 1-00ರ ವರೆಗೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅಮ್ಮುಂಜೆ ಇದರ ಸಭಾಭವನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷರಾದ ಪ್ರಸಾದ್ ಕೆ ಅಮ್ಮುಂಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಶಿಬಿರದಲ್ಲಿ ಉಚಿತವಾಗಿ ವಿವಿಧ ಆರೋಗ್ಯ ತಪಾಸಣೆಗಳ ಸೌಲಭ್ಯ ಲಭ್ಯವಿದೆ:ಕಣ್ಣು, ಕಿವಿ–ಮೂಗು–ಗಂಟಲು

ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆಯ ಜೊತೆಗೆ ಉಚಿತ ಇ.ಸಿ.ಜಿ. ಮತ್ತು ರಕ್ತದಲ್ಲಿನ ಸಕ್ಕರೆ ಪರೀಕ್ಷೆ ನಡೆಸಲಾಗುವುದು.

Leave a Comment