Coastal Bulletin

ಪುದು : ಕುಲಾಲ ಸುಧಾರಕ ಸಂಘ ( ರಿ)ನಾಣ್ಯ, ಫರಂಗಿಪೇಟೆ ಇದರ 30 ನೇ ವಾರ್ಷಿಕೋತ್ಸವ ಹಾಗೂ ಮಹಾಸಭೆಯು ಫೆ.26 ರಂದು ಸಂಘದ ಸಮುದಾಯ ಭವನದಲ್ಲಿ ನಡೆಯಲಿದೆ.ಮಹಾಸಭೆಯ ಅಧ್ಯಕ್ಷತೆಯನ್ನು ಬಿ.ನಾರಾಯಣ ವಹಿಸಲಿದ್ದಾರೆ.

ಬೆಳಗ್ಗೆ 8 ಗಂಟೆಗೆ ಗಣಹೋಮ,9 ಗಂಟೆಗೆ ವಾರ್ಷಿಕ ಮಹಾಸಭೆ ಮತ್ತು 10 ರಿಂದ 12.30 ರವರೆಗೆ ವಾರ್ಷಿಕ ಕ್ರೀಡಾಕೂಟ ಇರಲಿದೆ.

ಮಧ್ಯಾಹ್ನ 1 ಗಂಟೆಗೆ ಸಹ ಭೋಜನ. ನಂತರ 2.30 ಕ್ಕೆ ಸಂಗೀತ ಸ್ಪರ್ಧೆ ನಡೆಯಲಿದೆ. ಸಂಜೆ 4

ಗಂಟೆಯಿಂದ ವಾರ್ಷಿಕೋತ್ಸವ ಸಭಾ ಸಮಾರಂಭ ನಡೆಯಲಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ,ಪ್ರತಿಭಾ ಪುರಸ್ಕಾರ, ವಿದ್ಯಾ ಪ್ರೋತ್ಸಾಹಧನ ವಿತರಣೆ ನಡೆಯಲಿದೆ. ನಂತರ ವಿವಿಧ ಸಾಂಸ್ಕೃತಿಕ ವೈವಿದ್ಯಮಯ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಪ್ರ. ಕಾರ್ಯದರ್ಶಿ ವಿಶ್ವನಾಥ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment