ಬಂಟ್ವಾಳ:ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಇಂದು ಬಡವರ, ಜನ ಸಾಮಾನ್ಯರ ಬದುಕಿಗೆ ಆಸರೆಯಾಗಿದೆ,ಕಾಂಗ್ರೆಸ್ ಪಕ್ಷವು ಜನರ ಭಾವನೆ ಜತೆ ಎಂದೂ ರಾಜಕೀಯ, ಅಧಿಕಾರ ನಡೆಸದೆ ಜನರ ಬದುಕನ್ನು ಕಟ್ಟಿ ಕೊಡುವ ಕಾರ್ಯ ಮಾಡುತ್ತಾ ಬಂದಿದೆ. ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಬಂಟ್ವಾಳ ರಾಜ್ಯಕ್ಕೆ ಮಾದರಿ ಎಂದು ರಾಜ್ಯ ಗ್ಯಾರಂಟಿ ಅನುಷ್ಠಾನದ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.
ಅವರು ಮಂಗಳವಾರ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರ ದಲ್ಲಿ ಬಂಟ್ವಾಳ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ವತಿಯಿಂದ ನಡೆದ ಬಂಟ್ವಾಳ ಗ್ಯಾರಂಟಿ ಸಂಭ್ರಮೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ತಾಲೂಕು ಗ್ಯಾರಂಟಿ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಗೇರು ಅಭಿ ವೃದ್ಧಿ ನಿಗಮದ ಅಧ್ಯಕ್ಷೆ ಡಿ.ಎಸ್.ಮಮತಾ ಗಟ್ಟಿ ಗ್ಯಾರಂಟಿ ಅನು ಷ್ಠಾನದ ಪ್ರಾಧಿಕಾರದ ದ.ಕ.ಜಿಲ್ಲಾಧ್ಯಕ್ಷ ಭರತ್ ಮುಂಡೋಡಿಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.
ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೋ, ಬುಡಾ
ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಸಮಿತಿ ಉಪಾಧ್ಯಕ್ಷರಾದ ನಾರಾಯಣ ನಾಯ್ಕ ಜೋಕಿಂ ಡಿ'ಸೋಜಾ, ಸುರೇಖಾ, ಕಡಬ ತಾಲೂಕು ಅಧ್ಯಕ್ಷ ಸುಧೀರ್‌ಕುಮಾರ್, ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಸುಳ್ಯ ತಾಲೂಕು ಅಧ್ಯಕ್ಷ ಸಾಹುಲ್ ಹಮೀದ್, ಬೆಳ್ತಂಗಡಿ ತಾಲೂಕು ಅಧ್ಯಕ್ಷ ಪದ್ಮನಾಭ ಕೋಟ್ಯಾನ್, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಬಂಟ್ವಾಳ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಚಿನ್‌ಕುಮಾರ್, ಜಿಲ್ಲಾ ತಾಲೂಕು ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು.
ತಾಲೂಕು ಪ್ರಾಧಿಕಾರದ ಸದಸ್ಯರಾದ ವಿನಯಕುಮಾರ್ ಸಿಂಧ್ಯಾ ಸ್ವಾಗತಿಸಿದರು. ಸುಧೀಂದ್ರ ಕುಮಾರ್ ವಂದಿಸಿದರು. ಮಾಣಿ ಗ್ರಾ.ಪಂ.ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ನಿರ್ವಹಿಸಿದರು.














