ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ ಎಸ್.ಡಿ.ಎಮ್ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಯಶೋವರ್ಮ (66) ಅವರು ಅನಾರೋಗ್ಯದಿಂದ ಭಾನುವಾರ ಮಧ್ಯರಾತ್ರಿ ಸಿಂಗಪುರದಲ್ಲಿ ವಿಧಿವಶರಾಗಿದ್ದಾರೆ.
ನಿವೃತ್ತಿ ಬಳಿಕ ಅನಾರೋಗ್ಯದಿಂದ ಬಳಲುತ್ತಿದ್ದು, ಸಿಂಗಾಪೂರಕ್ಕೆ ಚಿಕಿತ್ಸೆಗಾಗಿ ಹೋಗಿದ್ದರು. ಭಾನುವಾರ ಮಧ್ಯರಾತ್ರಿ ಬಿಪಿ ಲೋ ಆಗಿ ನಿಧನ ಹೊಂದಿದ್ದಾರೆ.
ಡಾ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ
ಹೆಗ್ಗಡೆಯವರ ಪತ್ನಿ ಹೇಮಾವತಿ ಹೆಗ್ಗಡೆಯವರ ಸಹೋದರಾಗಿದ್ದಾರೆ. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಎಸ್‍ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದರು.















