ರಾಯಿ:ಗ್ರಾ ಪಂ ನಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಪ್ರತಿಭಟನೆ.

Coastal Bulletin
ರಾಯಿ:ಗ್ರಾ ಪಂ ನಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಪ್ರತಿಭಟನೆ.

ಬಂಟ್ವಾಳ: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ, ಬಂಟ್ವಾಳ ಬಿಜೆಪಿ ಬಂಟ್ವಾಳ ಮಂಡಲ ಆಶ್ರಯದಲ್ಲಿ ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರಿಂದ ನಡೆದ ರಾಜ್ಯ ಕಾಂಗ್ರೇಸ್ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ರಾಯಿ ಗ್ರಾಮ ಪಂಚಾಯತ್ ಕಚೇರಿಗಳ ಮುಂದೆ ನಡೆದ ಪ್ರತಿಭಟನೆ. ಈ ಪ್ರತಿಭಟನೆ ನೇತೃತ್ವವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ವಹಿಸಿ ಪ್ರತಿಭಟನಾಕಾರರನ್ನು ಉದ್ದೇಶಿ ಮಾತನಾಡಿದರು.

ಈ ಪ್ರತಿಭಟನೆಯಲ್ಲಿ ಮಾಜಿ ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ, ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ರಾಯಿಬೆಟ್ಟು, ಉಪಾಧ್ಯಕ್ಷರಾದ ಗುಣವತಿ ಪೂಜಾರಿ,ಬಂಟ್ವಾಳ ಬಿಜೆಪಿ ಮಂಡಲದ ಮಾಜಿ ಕಾರ್ಯದರ್ಶಿ ರಮನಾಥ ರಾಯಿ,ದುರ್ಗಾದಾಸ್ ಶೆಟ್ಟಿ ಮಾವಂತೂರು, ದ.ಕ ಬಿಜೆಪಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಸಹಸಂಚಾಲಕ ಹರೀಶ್ ರಾಯಿ, ಬಂಟ್ವಾಳ ಬಿಜೆಪಿ

ಮಂಡಲದ ಪ್ರಕೋಷ್ಠಗಳ ಸಂಚಾಲಕಾರದ ಚಂದ್ರಶೇಖರ ಗೌಡ ಕಾರಂಬಡೆ, ಸಂತೋಷ್ ಅಂಚನ್, ಆನಂದ ಬುರಾಲ್, ಜಯಂತ್ ಸಪಲ್ಯ, ಗ್ರಾಮ ಪಂಚಾಯತ್ ಸದಸ್ಯರು ಬಿಜೆಪಿ ಬಂಟ್ವಾಳ ಕಾರ್ಯಕಾರಿಣಿ ಸದಸ್ಯರಾದ ರವೀಂದ್ರ ಪೂಜಾರಿ ಬದನಾಡಿ, ಶಕ್ತಿಕೇಂದ್ರ ಸಂಚಾಲಕರು,ಬೂತ್ ಸಮಿತಿ ಅಧ್ಯಕ್ಷರು,ಕಾರ್ಯದರ್ಶಿಗಳು ಪಕ್ಷದ ಹಿರಿಯ ಕಾರ್ಯಕರ್ತರು, ಗ್ರಾಮಸ್ಥರು ಭಾಗವಹಿಸಿದರು. ರಶ್ಮಿತ್ ಶೆಟ್ಟಿ ಕೈತ್ರೋಡಿ ಸ್ವಾಗತಿ ಧನ್ಯವಾದವಿತ್ತರು.

Leave a Comment