ಬಂಟ್ವಾಳ: ಬಿ ಜೆ ಪಿ ಹಿಂದುಳಿದ ವರ್ಗಗಳ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

Coastal Bulletin
ಬಂಟ್ವಾಳ: ಬಿ ಜೆ ಪಿ ಹಿಂದುಳಿದ ವರ್ಗಗಳ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

ಬಂಟ್ವಾಳ :ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಬಂಟ್ವಾಳ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯು ಜು 22ರಂದು ಬಿಜೆಪಿ ಪಕ್ಷದ ಕಚೇರಿಯಲ್ಲಿ ಓಬಿಸಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಯಶೋಧರ ಕಾರ್ಬೆಟ್ಟು ಇವರ ನೇತೃತ್ವದಲ್ಲಿ ನಡೆಯಿತು.

ಈ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲಾ ಓಬಿಸಿ ಅಧ್ಯಕ್ಷರಾದ ಮಹೇಶ್ ಜೋಗಿ ಮತ್ತು ಜಿಲ್ಲಾ ಒಬಿಸಿ ಉಪಾಧ್ಯಕ್ಷರಾದ ಹಾಗೂ ಬಂಟ್ವಾಳ ಒಬಿಸಿ ಪ್ರಭಾರಿಯಾದ ವಿನೋದ್ ಬೆಳ್ಳೆಯಾರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೋನಪ್ಪ ದೇವಸ್ಯ ಮತ್ತು ಶಶಿಧರ ಕಲ್ಮಂಜ, ಜಿಲ್ಲಾ ಒಬಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಚಿದಾನಂದ

ಕಲ್ಲಡ್ಕರವರು ಮತ್ತು ಬಂಟ್ವಾಳ ಒ ಬಿ ಸಿ ಮಂಡಳದ ಪ್ರಧಾನ ಕಾರ್ಯದರ್ಶಿ ಉಮೇಶ್ ಅರಳರವರು ಹಾಗೂ ಬಂಟ್ವಾಳ ಒಬಿಸಿ ಮಂಡಲದ ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು ಬಂಟ್ವಾಳ ಮಂಡಲ ಒ ಬಿ ಸಿ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ದಾಸ್ ಕೊಟ್ಟರಿಯವರು ಸ್ವಾಗತಿಸಿ ವಂದಿಸಿದರು.

Leave a Comment