ಬಂಟ್ವಾಳ :ಕರ್ನಾಟಕ ರಾಜ್ಯ ಸಹಕಾರ ಕ್ರಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಬೆಂಗಳೂರು ಇದರ ವಾರ್ಷಿಕ ಮಹಾಸಭೆಯಲ್ಲಿ 2022-23 ಸಾಲಿನ ಸಾಲ ವಸೂಲಾತಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ರಾದ ಶ್ರೀ ಅರುಣ್ ರೋಶನ್ ಡಿ ಸೋಜ ಪ್ರಶಸ್ತಿ ಸ್ವೀಕರಿಸಿದರು.
ಕಾಸ್ಕಾರ್ಡ್ ಬ್ಯಾಂಕಿನ ಅಧ್ಯಕ್ಷರು, ಶಾಸಕರಾದ ಷಡಕ್ಷರಿ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬ್ಯಾಂಕಿನ ವ್ಯವಸ್ಥಾಪಕ ಪದ್ಮನಾಭ ಜಿ .ಮತ್ತು ಕಾಸ್ಕಾರ್ಡ್ ಬ್ಯಾಂಕಿನ ಜಿಲ್ಲಾ ನಿರ್ದೇಶಕ ರಾದ ರಾಜಶೇಖರ ಜೈನ್
ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕೋಸ್ಟಲ್ ಬುಲೆಟಿನ್ ಗೆ ಮಾಹಿತಿ ನೀಡಿದ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರಾದ ಅರುಣ್ ರೋಶನ್ ಡಿ ಸೋಜರವರು 2022-23 ಸಾಲಿನ ವ್ಯವಹಾರದಲ್ಲಿ ಉತ್ತಮ ಸಾಧನೆ ಮಾಡಿ ಸುಮಾರು 54ಲಕ್ಷ ಲಾಭಂಶ ಬಂದಿದೆ ಎಂದು ತಿಳಿಸಿದರು.















