ಬಂಟ್ವಾಳ :ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬಂಟ್ವಾಳ ತಾಲೂಕು ಘಟಕವು ಹಿರಿಯ ವಿದ್ಯಾರ್ಥಿ ಸಂಘ - ಸರಕಾರಿ ಪ್ರೌಢಶಾಲೆ ಮಂಚಿ - ಕೊಳ್ನಾಡು ಇದರ ಸಹಯೋಗದಲ್ಲಿ 23 ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ - 2024 ಆಯೋಜಿಸುವ ಕುರಿತು ಪೂರ್ವಭಾವಿ ಸಭೆಯನ್ನು ಸೆ.22ಆದಿತ್ಯವಾರ ಮಂಚಿ ಕೊಳ್ನಾಡು ಪ್ರೌಢಶಾಲಾ ಸಭಾಂಗಣದಲ್ಲಿ ನಡೆಸಲಾಯಿತು.
ಬಂಟ್ವಾಳ ತಾಲೂಕು ಸಾಹಿತ್ಯ ಪರಿಷತ್ತು ಘಟಕದ ಗೌರವ ಕಾರ್ಯದರ್ಶಿಯಾದ ಶ್ರೀ ವಿ ಸುಬ್ರಹ್ಮಣ್ಯ ಭಟ್ ಮಾತನಾಡಿ, "ಸಾಹಿತ್ಯ ಸಮ್ಮೇಳನವೆಂದರೆ ಅದು ಅವಿಸ್ಮರಣೀಯವಾಗಿ ಉಳಿಯುವ ಕಾರ್ಯಕ್ರಮ. ಹೋಬಳಿ, ತಾಲೂಕು, ಜಿಲ್ಲೆ ಅಥವಾ ಅಖಿಲ ಭಾರತ ಸಮ್ಮೇಳನವೆಂದು ತಾರತಮ್ಯ ಮಾಡಬೇಕಿಲ್ಲ. ಎಲ್ಲೆಡೆಯ ಸಾಹಿತ್ಯ ಪ್ರತಿಭೆಗಳಿಗೆ ಅವಕಾಶವೆಂಬ ವೇದಿಕೆ ಸಿದ್ಧವಾಗಬೇಕಾಗಿದೆ. ಮಂಚಿಯಂತಹ ಗ್ರಾಮೀಣ ಪ್ರದೇಶದಲ್ಲಿ 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜನೆಗೆ ಮನಸು ಮಾಡಿರುವ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಇಲ್ಲಿನ ನಾಗರಿಕರು ಅಭಿನಂದನಾರ್ಹರು." ಎಂದರು
23 ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಸಮಿತಿಯನ್ನು ರಚನೆ ಮಾಡಲಾಯಿತು. ಸಮಿತಿಯ ಕಾರ್ಯಾಧ್ಯಕ್ಷರಾಗಿ ಲಯನ್ ಹಾಜಿ ಸುಲೈಮಾನ್ ನಾರ್ಶ ಮೈದಾನ, ಅಧ್ಯಕ್ಷರಾಗಿ ಲಯನ್ ಸತೀಶ್ ಕುಮಾರ್ ಆಳ್ವ ಇರಾ ಬಾಳಿಕೆ, ಪ್ರಧಾನ ಕಾರ್ಯದರ್ಶಿಯಾಗಿ ಉಪನ್ಯಾಸಕ ಶ್ರೀ ಎಂ ಡಿ ಮಂಚಿ, ಕೋಶಾಧಿಕಾರಿಯಾಗಿ ಹಾಜಿ ಸುಲೈಮಾನ್ ಜಿ ಸುರಿಬೈಲು ಇವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷ, ಜೊತೆ
ಕಾರ್ಯದರ್ಶಿ ಹಾಗೂ ಇನ್ನಿತರ ಸಮಿತಿಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಪೂರ್ವಭಾವಿ ಸಭೆಯಲ್ಲಿ ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ವಿಶ್ವನಾಥ್ ಬಂಟ್ವಾಳ, ಕೋಶಾಧಿಕಾರಿಯಾದ ಡಿ ಬಿ ಅಬ್ದುಲ್ ರಹಿಮಾನ್, ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶ್ರಫ್, ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಂ ಜಿ ಇಬ್ರಾಹಿಂ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಸೆರ್ಕಳ, ಕೊಳ್ನಾಡು ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಶೀಲ ವಿಟ್ಲ ಉಪಸ್ಥಿತರಿದ್ದರು.
ಸರಕಾರಿ ಪ್ರೌಢಶಾಲೆ ಮಂಚಿ - ಕೊಳ್ನಾಡು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಲಯನ್ ರಾಮ್ ಪ್ರಸಾದ್ ರೈ ತಿರುವಾಜೆ ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಮತ್ತು ಉಪನ್ಯಾಸಕರಾದ ಶ್ರೀ ಎಂ ಡಿ ಮಂಚಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನ್ಯಾಯವಾದಿ ರವೀಂದ್ರ ಕುಕ್ಕಾಜೆ ವಂದಿಸಿದರು. ಬಂಟ್ವಾಳ ತಾಲೂಕು ಸಾಹಿತ್ಯ ಪರಿಷತ್ ಘಟಕದ ಗೌರವ ಕಾರ್ಯದರ್ಶಿ ಲಯನ್ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.
















