ಮಂಗಳೂರು : ಕೆನರಾ ಇಂಜಿನಿಯರಿಂಗ್ ಕಾಲೇಜಿನ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಶಿನ್ ಲರ್ನಿಂಗ್ ವಿಭಾಗದ ವತಿಯಿಂದ ಇಂಟರ್ನೆಟ್ ಆಫ್ ಥಿಂಗ್ಸ್ - ಫ್ರಾಮ್ ಪ್ರಾಬ್ಲೆಮ್ಸ್ ಟು ಪ್ರೂಫ್ ಆಫ್ ಕಾನ್ಸೆಪ್ಟ್ ' ಕುರಿತ ಮೂರು ದಿನಗಳ ಕಾರ್ಯಾಗಾರ ಅ 23 ಬುಧವಾರ ಉದ್ಘಾಟನೆಗೊಂಡಿತು.
ಕಾಕುಂಜೆ ಸಾಫ್ಟ್ವೇರ್ ಪ್ರೈ.ಲಿ. ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಆಡಳಿತ ನಿರ್ದೇಶಕ ಗೋಪಾಲ ಕೃಷ್ಣ ಭಟ್ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಸಮಾಜಮುಖಿ ಸಮಸ್ಯೆಗಳನ್ನು ಗುರುತಿಸಿ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಐಓಟಿ, ಮೆಶಿನ್ ಲರ್ನಿಂಗ್ ತಂತ್ರಜ್ಞಾನವನ್ನು ಬಳಸಿಕೊಳ್ಳುವ
ಉದ್ದೇಶದಿಂದ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ.ನಾಗೇಶ್ ಹೆಚ್. ಆರ್, ಅಕ್ರೆಡಿಟೇಶನ್ ವಿಭಾಗ ಡೀನ್ ಡಾ. ವೆಂಕಟೇಶ್ ಎನ್, ಎಐಎಂಎಲ್ ವಿಭಾಗ ಮುಖ್ಯಸ್ಥ ಡಾ. ಬಸಪ್ಪ ಬಿ.ಕೊಡಡ, ಸಹ ಪ್ರಾಧ್ಯಾಪಕಿ ಕಣ್ಮಣಿ ಮತ್ತಿತರರು ಉಪಸ್ಥಿತರಿದ್ದರು.















