ಬಂಟ್ವಾಳ : ವಿದ್ಯಾರ್ಥಿಗಳ ಸಾಧನೆಗೆ ಪ್ರೋತ್ಸಾಹ, ಪ್ರತಿಭಾವಂತರಿಗೆ ಗೌರವ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಬಂಟ್ವಾಳ ತಾಲೂಕು ಕುಲಾಲ ಸು‘ರಕ ಸಂಘ ವತಿಯಿಂದ ಅಕ್ಟೋಬರ್ 25ರಂದು ಅಪರಾಹ್ನ 2.30ಕ್ಕೆ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ಪ್ರತಿಭಾಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ನಡೆಯಲಿದೆ.
ರಾಜ್ಯ ಕುಂಬಾರರ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶ್ರೀನಿವಾಸ ವೇಲು, ದಕ್ಷಿಣ ಕನ್ನಡ ಜಿಲ್ಲಾ ಮಾತೃಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಸುರೇಶ್ ಕುಮಾರ್ ಬಿ. ನಾವೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಉಪನ್ಯಾಸಕಿ ಡಾ. ಆಶಾಲತಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದಾಮೋದರ ಮಾಸ್ಟರ್ ಏರ್ಯ, ಕರ್ನಾಟಕ ಐಡಲ್ ಪ್ರಶಸ್ತಿ ಪುರಸ್ಕೃತ ಸದಾನಂದ ಬಿ. ಬಂಗೇರ ಮೊಡಂಕಾಪು ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಗೌರವ ಪುರಸ್ಕೃತ ಬೇಬಿ ಪ್ರಾದ್ಯಾ ಅವರನ್ನು ಈ ಸಂದ‘ದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು. ಕುಲಾಲ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಲಾಗುವುದು. ಜೊತೆಗೆ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ನಿರಂತರ ವಿದ್ಯಾರ್ಥಿವೇತನ ವಿತರಿಸಲಾಗುವುದು. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಅವರ ಮುಂದಿನ ಶೈಕ್ಷಣಿಕ ಪಯಣಕ್ಕೆ ಪ್ರೇರಣೆ ನೀಡುವ ಈ ಕಾರ್ಯಕ್ರಮದಲ್ಲಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.








