Coastal Bulletin

ಬಂಟ್ವಾಳ :ದಕ್ಷಿಣ ಕನ್ನಡ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಂಗಳೂರು ಇದರ ವತಿಯಿಂದ ಬಂಟ್ವಾಳ ತಾಲೂಕಿನ ಇರ್ವತ್ತೂರು ಮತ್ತು ಮೂಡುಪಡುಕೋಡಿ ಗ್ರಾಮಗಳನ್ನು ಹರ್ ಘರ್ ಜಲ್ ಗ್ರಾಮವಾಗಿ ಘೋಷಣೆ ಮಾಡಲಾಗಿದೆ.

ಜಲ ಜೀವನ್ ಮಿಷನ್ ಆಶಯದಂತೆ ಎಲ್ಲಾ ಮನೆಗಳಿಗೂ ನಳ್ಳಿ ಸಂಪರ್ಕ ಕಲ್ಪಿಸಲಾಗಿದ್ದು ಈಗ ಪಂಚಾಯತ್ ತನ್ನ ಗುರಿ ಮುಟ್ಟಿದೆ. ನವೆಂಬರ್ 18 ರಂದು ಶುಕ್ರವಾರ ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಹರ್ ಘರ್ ಜಲ್ ಘೋಷಣೆ ಕಾರ್ಯಕ್ರಮ ನಡೆಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ. ಎನ್ ಶೇಖರ್ , ಉಪಾಧ್ಯಕ್ಷೆ ಹರಿಣಾಕ್ಷಿ ಪಂ. ಅ. ಅಧಿಕಾರಿಗಳು ˌ ಪಂಚಾಯತ್ ಸದಸ್ಯರುˌ ಪಂಪು ಚಾಲಕರುˌ ಪಂಚಾಯತ್ ಸಿಬ್ಬಂದಿಗಳುˌ ಹಾಗೂ ಫಲಾನುಭವಿಗಳ ಸಮ್ಮುಖದಲ್ಲಿ ಇರ್ವತ್ತೂರು ಮತ್ತು ಮೂಡುಪಡುಕೋಡಿ ಈ ಎರಡು ಗ್ರಾಮಗಳನ್ನು ಹರ್ ಘರ್ ಜಲ್

ಗ್ರಾಮವೆಂದು ಘೋಷಣೆ ಮಾಡಲಾಯಿತು.

ಪಂಚಾಯತ್ ಅಧ್ಯಕ್ಷರು ಮಾತನಾಡಿ ಜಲಜೀವನ್ ಮಿಷನ್ ನ ಅನುಷ್ಠಾನ ಯಶಸ್ವಿಯಾಗಿದೆ . ಸರ್ಕಾರದ ಈ ಯೋಜನೆ ಗ್ರಾಮದ ಪ್ರತಿಯೊಬ್ಬರಿಗೂ ಶುದ್ಧ ಮತ್ತು ಸುರಕ್ಷಿತ ನೀರು ಒದಗಿಸಿ ಕೊಡುವಲ್ಲಿ ಸಫಲವಾಗಿದೆ ಆದುದರಿಂದ ಎರಡು ಗ್ರಾಮಗಳನ್ನು ಹರ್ ಘರ್ ಜಲ್ ಗ್ರಾಮವೆಂದು ಘೋಷಿಸಲು ಸಂತೋಷವಾಗುತ್ತದೆ ಎಂದು ತಿಳಿಸಿದರು.

ಜಲಜೀವನ್ ಮಿಷನ್ ನ ಯೋಜನಾ ವ್ಯವಸ್ಥಾಪಕ ವಿಘ್ನೇಶ್ ರಾಜ್ˌ ಅನುಷ್ಠಾನ ಬೆಂಬಲ ಸಂಸ್ಥೆಯ ತಂಡದ ನಾಯಕರಾದ ಶಿವರಾಮ್, ಫಲಾರೇಶ್ ˌ ಅಶ್ವಿನ್, ಅನುಷ್ಠಾನ ಬೆಂಬಲ ಸಂಸ್ಠೆ - 2ನ ಸಿಬ್ಬಂದಿಗಳಾದ ವಿಲ್ಮಾ ಮತ್ತು ಗುಣವತಿಯವರು ಉಪಸ್ಠಿತರಿದ್ದರು.

Leave a Comment