Coastal Bulletin

ಬಂಟ್ವಾಳ: ಕಲೆ, ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಪ್ರೋತ್ಸಾಹಕಾಗಿ ಆರಂಭಗೊಂಡ ರಾರಾಸಂ ಫೌಂಡೇಶನ್ ಬಂಟ್ವಾಳ ಇದರ 12ನೇ ವರ್ಷದ ಸಾಂಸ್ಕೃತಿಕ ಕಲರವ ರಾರಾ ಸಂಭ್ರಮ ಡಿ.25ರಂದು ಆದಿತ್ಯವಾರ ಬೆಳಿಗ್ಗೆ ೯ ರಿಂದ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಏರ್ಯಬೀಡು ಬಾಲಕೃಷ್ಣ ಹೆಗ್ಡೆ ಉದ್ಘಾಟಿಸುವರು, ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ವಿಶ್ವನಾಥ ಬಂಟ್ವಾಳ, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ನಾರಾಯಣ ಸಿ. ಪೆರ್ನೆ, ವಕೀಲ ಸುರೇಶ್ ಕುಮಾರ್ ನಾವೂರು, ಜೆಸಿಐ ಬಂಟ್ವಾಳ ಅಧ್ಯಕ್ಷ ರಾಜೇಂದ್ರ ಕೆ. ಭಾಗವಹಿಸುವರು.

 ಸಂಜೆ 4ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ಶಾಸಕ ರಾಜೇಶ್ ನಾಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕುಲಾಲ್, ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ಉಮೇಶ್

ಆಚಾರ್, ನಿವೃತ್ತ ಮುಖ್ಯ ಶಿಕ್ಷಕ ಬಿ.ರಾಮಚಂದ್ರ ರಾವ್, ಸುಧಾಕರ ಸುರತ್ಕಲ್, ಜೇಸಿಐ ಮಡಂತ್ಯಾರು ಅಧ್ಯಕ್ಷ ಅಶೋಕ್ ಗುಂಡಿಯಲ್ಕೆ, ಉದ್ಯಮಿ ತಪೋದನ್ ಶೆಟ್ಟಿ ಭಾಗವಹಿಸುವರು.

 ಈ ಸಂದರ್ಭ ಬಹುಮುಖ ಬಾಲಪ್ರತಿಭೆ ಸಮೃದ್ಧಿ ಎಂ.ಕೆ. ಮರೋಳಿ ಅವರಿಗೆ ರಾರಾಸಂ ಪುರಸ್ಕಾರ, ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಚಿತ್ರಕಲಾ ಶಿಕ್ಷಕ ಚೆನ್ನಕೇಶವ ಮಾಸ್ತರ್ ಅವರಿಗೆ ಗೌರವಾಭಿನಂದನೆ ನಡೆಯಲಿದೆ.

ರಾರಾಸಂಭ್ರಮದ ಅಂಗವಾಗಿ ಮಕ್ಕಳಿಗೆ ಮಹಿಳೆಯರಿಗೆ ಹಾಗೂ ಮುಕ್ತ ವಿಭಾಗದಲ್ಲಿ ವಿವಿಧ ಸ್ಪರ್ಧಾಕಾರ್ಯಕ್ರಮ ಗಳು ನಡೆಯಲಿದೆ ಎಂದು ರಾರಾಸಂ ಫೌಂಡೇಶನ್ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಹಾಗೂ ಕಾರ್ಯಕ್ರಮ ಸಂಯೋಜಕ ಕೇಶವ ಮಾಸ್ತರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment