Coastal Bulletin

ಕಲ್ಲಡ್ಕ : ಡಿ.24 – 26ರಂದು ಶ್ರೀರಾಮ ವಿದ್ಯಾಕೇಂದ್ರದ ಶ್ರೀರಾಮ ಪ್ರಥಮದರ್ಜೆ ಕಾಲೇಜು ಕಲ್ಲಡ್ಕ ಇದರ ಆಶ್ರಯದಲ್ಲಿ ಭವಿಷ್ಯದಲ್ಲಿ ಶಿಕ್ಷಕರಾಗಲು ಬಯಸುವ ವಿದ್ಯಾರ್ಥಿಗಳಿಗಾಗಿ ಭವಿಷ್ ಘಟಕದ ವತಿಯಿಂದ ಮೂರು ದಿನಗಳ ಆವಾಸೀಯ ಶಿಬಿರ ಹಮ್ಮಿಕೊಳ್ಳಲಾಗಿದೆ.

ಡಿ. 24ರ ಶನಿವಾರದಂದು  ಬಂಟ್ವಾಳದ ತಹಶೀಲ್ದಾರ್ ಸ್ಮಿತಾ ರಾಮು ರವರು ಶಿಬಿರದ ಉದ್ಘಾಟಿಸಲಿದ್ದಾರೆ. ಶ್ರೀರಾಮ ವಿದ್ಯಾ ಕೇಂದ್ರದ ಸಂಚಾಲಕ ವಸಂತ ಮಾಧವ, ಅ.ಭಾ.ಕುಟುಂಬ ಪ್ರಭೋದನ್ ಕಾರ್ಯಕಾರಣಿ ಸದಸ್ಯರಾದ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿರುವರು.

ದಿನಾಂಕ 26-12-22ರ ಸೋಮವಾರದಂದು  ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ  ಡಾ| ಪ್ರಭಾಕರ ಭಟ್ ಕಲ್ಲಡ್ಕ

ರವರ ಅಧ್ಯಕ್ಷತೆಯಲ್ಲಿ ಸಮಾರೋಪ ನಡೆಯಲಿದ್ದು, ಶ್ರೀರಾಮ ವಿದ್ಯಾ ಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ ಹಾಗೂ ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ ವಿಷ್ಣು ಗಣಪತಿ ಭಟ್ ಉಪಸ್ಥಿತರಿರುವರು ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ  ಮೌಲ್ಯ ಮತ್ತು ಕೌಶಲ್ಯ ಆಧಾರಿತ ಉಪನ್ಯಾಸದ ಜೊತೆಗೆ ಚಟುವಟಿಕೆಗಳು ನಡೆಯಲಿದೆ. ಈ ಕುರಿತು ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Comment