ಬಂಟ್ವಾಳ: ಬಿ.ಸಿ.ರೋಡ್ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಡಿಸೆಂಬರ್ 30ರಂದು ಶಾಲಾ ಆವರಣದಲ್ಲಿ ನಡೆಯಲಿದೆ. ಈ ಸಂದರ್ಭ ಮಧ್ಯಾಹ್ನ 3 ಗಂಟೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಲಿದ್ದು, ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸುವರು,
ಸ್ಥಳೀಯ ಪುರಸಭಾ ಸದಸ್ಯೆ ವಿದ್ಯಾವತಿ ಪ್ರಮೋದ್ ಕುಮಾರ್, ಸೋಮಯಾಜಿ ಆಸ್ಪತ್ರೆಯ ಡಾ. ರಮೇಶಾನಂದ ಸೋಮಯಾಜಿ, ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಪ್ರಕಾಶ್ ಬಾಳಿಗಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್, ಕ್ಷೇತ್ರ ಸಮನ್ವಯಾಧಿಕಾರಿ ರಾಘವೇಂದ್ರ ಬಲ್ಲಾಳ್, ಶಿಕ್ಷಣ ಸಂಯೋಜಕರಾದ ಸುಜಾತಾಕುಮಾರಿ, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರೇಮಲತಾ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್
ನ ಮುಖ್ಯಸ್ಥ ಅರ್ಜುನ್ ಭಂಡಾರ್ಕಾರ್, ಬೆಂಗಳೂರಿನ ತನುಜಾ ಮೋಹನ್, ಗುತ್ತಿಗೆದಾರರಾದ ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ದಸ್ತಾವೇಜು ಬರೆಹಗಾರರಾದ ಗಣೇಶ್ ರಾವ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಪಿ.ಎಸ್. ಮತ್ತು ಪದ್ಮಾ ಸರ್ವೀಸಸ್ ಮಾಲೀಕರಾದ ಐತಪ್ಪ ಆಳ್ವ ಭಾಗವಹಿಸಲಿದ್ದಾರೆ ಎಂದು ಎಸ್.ಡಿ.ಎಂ.ಸಿ ಅಧ್ಕಕ್ಷ ಹರೀಶ ಮಾಂಬಾಡಿ ಮತ್ತು ಮುಖ್ಯ ಶಿಕ್ಷಕಿ ಕೆ.ಲಕ್ಷ್ಮೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














