ರಾಮಲ್ ಕಟ್ಟೆ: ಹಿಟ್ ಅಂಡ್ ರನ್ ಕೇಸ್, ಸ್ಕೂಟರ್‌ ಸವಾರನ ಸಾವು.

Coastal Bulletin
ರಾಮಲ್ ಕಟ್ಟೆ: ಹಿಟ್ ಅಂಡ್ ರನ್ ಕೇಸ್, ಸ್ಕೂಟರ್‌ ಸವಾರನ ಸಾವು.

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ರಾಮಲ್ ಕಟ್ಟೆ ಎಂಬಲ್ಲಿ ಅಪರಿಚಿತ ಆಟೋ ರಿಕ್ಷಾ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಡಿ 22ರಂದು ರಾತ್ರಿ ನಡೆದಿದೆ.

ಗಾಯಗೊಂಡವರನ್ನು ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂದು ಗುರುತಿಸಲಾಗಿದ್ದು, ಡಿಕ್ಕಿ ಹೊಡೆದ ರಿಕ್ಷಾ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾನೆ.

ಉಸ್ಮಾನ್ ಅವರು ಅಂಗಡಿಯಿಂದ ಹಾಲು ಖರೀದಿಸಿ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ದಾಟಲು ಹೆದ್ದಾರಿ ಬದಿ ನಿಲ್ಲಿಸಿದ್ದ ಸ್ಕೂಟರ್ ಗೆ ಅಪರಿಚಿತ ಆಟೋ ರಿಕ್ಷಾ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ತೀರಾ ಎಡಬದಿಗೆ ವಾಹನ

ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಉಸ್ಮಾನ್ ಅವರಿಗೆ ಗಂಭೀರ ಗಾಯವಾಗಿ ತಕ್ಷಣವೇ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಸಾವನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Leave a Comment