ಬಂಟ್ವಾಳ: ಮಾ.6 ರಂದುನಡೆಯಲಿರುವ ಶ್ರೀ ಶ್ರೀ ಕೇಶವಾನಂದ ಮಹಾ ಭಾರತಿ ರವರ ಸಂಸ್ಮರಣೆ ಮತ್ತು ಹಿರಿಯ ಸಾಮಾಜಿಕ ನೇತಾರ, ಧರ್ಮಸ್ಥಳ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿಯವರ ಅಭಿನಂದನಾ ಸಮಾರಂಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಹಕಾರ ನೀಡಬೇಕೆಂದು ಅಭಿನಂದನಾ ಸಮಿತಿ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಹೇಳಿದರು.
ಅವರು ಬಂಟ್ವಾಳ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ ವಲಯಸಭಾಂಗಣದಲ್ಲಿ ಸಭಾಂಗಣದಲ್ಲಿ ಸೇವಾ ನಿರತರು ಮತ್ತು ಒಕ್ಕೂಟ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ವೇದಿಕೆಯಲ್ಲಿ ಶ್ರೀ.ಕ್ಷೇ.ಧ.ಗ್ರಾ.ಯೋ. ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಉಪಸ್ಥಿತರಿದ್ದು , ಸಲಹೆ ಸೂಚನೆಗಳನ್ನು ನೀಡಿದರು. ಎ.ಸಿ.ಭಂಡಾರಿಯವರು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಉತ್ತಮ ಕೆಲಸಗಳನ್ನು ಮಾಡಿ ಪಾನಮುಕ್ತರಾಗಿಸುವಲ್ಲಿ ಮಧ್ಯವರ್ಜನ ಶಿಬಿರಗಳನ್ನು ಏರ್ಪಡಿಸಿ ಹಲವರನ್ನು ಮಧ್ಯಪಾನ ಮುಕ್ತರನ್ನಾಗಿಸಿದ್ದಾರೆ. ಅವರ ಸೇವೆಗೆ ಅಭಿನಂದನೆ ಸಲ್ಲಿಸುವ
ಅವಕಾಶ ಬಂದಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಿಕೊಂಡರು
ವೇದಿಕೆಯಲ್ಲಿ ಶ್ರೀ ಕ್ಷೇತ್ರ ನಂದಾವರದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ, ಅಭಿನಂದನಾ ಸಮಿತಿ ಸಂಚಾಲಕ ಜಗನ್ನಾಥ ಚೌಟ ಬದಿಗುಡ್ಡೆ, ಕಾರ್ಯದರ್ಶಿ ರಾಜಾ ಬಂಟ್ವಾಳ, ಯೋಜನಾಧಿಕಾರಿ ಜಯಾನಂದ ಪಿ., ಸೀತರಾಮ ಶೆಟ್ಟಿ ಕಾಂತಾಡಿ , ಪರಮೇಶವರ ಮೂಲ್ಯ, ಪ್ರಭಾಕರ ಶೆಟ್ಟಿ ಕಾಂತಾಡಿ , ಜಯಾನಂದ ಪೆರಾಜೆ ಮೊದಲಾದವರು ಸಲಹೆ ಸೂಚನೆಗಳನ್ನು ನೀಡಿದರು.














