ಬಂಟ್ವಾಳ :"ಸ್ವಾತಂತ್ರ್ಯಯೋಧ ಡಾ. ಅಮ್ಮೆಂಬಳ ಬಾಳಪ್ಪ" ರಸ್ತೆ ಅಭಿವೃದ್ಧಿಗೆ ಶಾಸಕರಿಗೆ ಮನವಿ

Coastal Bulletin
ಬಂಟ್ವಾಳ :"ಸ್ವಾತಂತ್ರ್ಯಯೋಧ ಡಾ. ಅಮ್ಮೆಂಬಳ ಬಾಳಪ್ಪ" ರಸ್ತೆ ಅಭಿವೃದ್ಧಿಗೆ ಶಾಸಕರಿಗೆ ಮನವಿ

ಬಂಟ್ವಾಳ, ಫೆ. 24:ದೇಶಭಕ್ತ ಸ್ವಾತಂತ್ರ್ಯ ಹೋರಾಟಗಾರರಾದ ಡಾ. ಅಮ್ಮೆಂಬಳ ಬಾಳಪ್ಪ ಅವರ ಹೆಸರಿನಲ್ಲಿ ನಾಮಕರಣಗೊಂಡಿರುವ ರಸ್ತೆ ಪೊಸಳ್ಳಿ, ದೈಪಲ, ಕಾಮಾಜೆ ಹಾಗೂ ಕುಲಾಲ ಮಠ ಗ್ರಾಮಗಳ ಮೂಲಕ ಹಾದು ಹೋಗುತ್ತಿದ್ದು, ಇದರ ಅಭಿವೃದ್ಧಿಗಾಗಿ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಮಂಗಳವಾರ ಬಿ.ಸಿ.ರೋಡಿನ ಶಾಸಕರ ಕಚೇರಿಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಶಾಸಕ ರಾಜೇಶ್ ನಾಯಕ್ ಯು. ಅವರಿಗೆ ಮನವಿ ಪತ್ರ ನೀಡಲಾಯಿತು. ರಸ್ತೆ ಅಭಿವೃದ್ಧಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ರಸ್ತೆ ಅಭಿವೃದ್ಧಿಯಾದರೆ ಗ್ರಾಮವೂ ಅಭಿವೃದ್ಧಿಯಾಗುತ್ತದೆ. ಇದರಿಂದ ಈ ಭಾಗದ ಗ್ರಾಮಸ್ಥರಿಗೆ ಸಂಚಾರ ಸುಗಮವಾಗಿ ವಿವಿಧ ಮೂಲಭೂತ

ಸೌಕರ್ಯಗಳು ಸುಧಾರಣೆಯಾಗಲಿವೆ. ಆದಷ್ಟು ಬೇಗ ರಸ್ತೆ ಅಭಿವೃದ್ಧಿಗೆ ಯೋಜನೆ ರೂಪಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಬಿ. ರಮೇಶ್ ಸಾಲ್ಯಾನ್ ಸಂಚಯಗಿರಿ, ಪ್ರಧಾನ ಕಾರ್ಯದರ್ಶಿ ಯಾದವ ಕುಲಾಲ್ ಅಗ್ರಬೈಲು, ಕಾರ್ಯಕಾರಿ ಸಮಿತಿ ಸದಸ್ಯ ಮಚೇಂದ್ರ ಸಾಲ್ಯಾನ್ ಹಾಗೂ ಮಾಜಿ ಅಧ್ಯಕ್ಷ ಸತೀಶ್ ಕುಲಾಲ್ ಉಪಸ್ಥಿತರಿದ್ದರು

Leave a Comment