ಬಂಟ್ವಾಳ :ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆ. ಎಸ್. ಹೆಗ್ಡೆ ಆಸ್ಪತ್ರೆ, ದೇರಳಕಟ್ಟೆ ಇವರ ಸಹಯೋಗದಲ್ಲಿ 135ನೇ ರಕ್ತದಾನ ಶಿಬಿರವು ಮಾ.29ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9ರಿಂದ 1ರ ವರೆಗೆ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ.
ಶಿಬಿರದ ಉದ್ಘಾಟನೆಯನ್ನು ಯಶ್ ಕುಮಾರ್ ಶರ್ಮ IPS ಸಹಾಯಕ ಪೊಲೀಸ್ ಅಧೀಕ್ಷಕರು, ಬಂಟ್ವಾಳ ಹಾಗೂ ಅತಿಥಿಯಾಗಿ ಎನ್. ಪ್ರಕಾಶ್ ಕಾರಂತ, ಮಾಜಿ
ಗವರ್ನರ್, ರೋಟರಿ ಜಿಲ್ಲೆ ಇವರು ಉಪಸ್ಥಿತರಿರುವರು ಎಂದು ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೆ ಕೃಷ್ಣಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















