ಕುಲಶೇಖರ, ಮೇ ೨೪: ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾಗಿರುವ ಶ್ರೀ ವೀರನಾರಾಯಣ ದೇವರಿಗೆ ೭೪ ವರ್ಷದ ಬಳಿಕ ಇಂದು ಬೆಳಿಗ್ಗೆ ಬೆಳಿಗ್ಗೆ ಮಿಥುನ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕವು ಉಡುಪಿಯ ಪೇಜಾವರ ಶ್ರೀಗಳಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಮಾಣಿಲ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಕ್ಷೇತ್ರದ ತಂತ್ರಿವರ್ಯರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಗಳೊಂದಿಗೆ ಅತ್ಯಂತ ಶ್ರದ್ಧಾಭಕ್ತಿಯಿಂದ ಜರಗಿತು.
ಉಡುಪಿಯ ಪೇಜಾವರ ಶ್ರೀಗಳಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕವಾಟೋದ್ಘಾಟನೆ, ಹೋಮ ಕಲಶಾಭಿಷೇಕ, ತತ್ವಕಲಶಾಭಿಷೇಕ, ಪರಿಕಲಶಾಭಿಷೇಕಕ್ಕೆ ಚಾಲನೆ ನೀಡಿದರು.
ದೇವಸ್ಥಾನದ ಸಮಿತಿ ಪದಾಧಿಕಾರಿಗಳಾದ ಮಯೂರ್ ಉಳ್ಳಾಲ್, ಪುರುಷೋತ್ತಮ ಕುಲಾಲ್, ಬಿ. ಪ್ರೇಮಾನಂದ ಕುಲಾಲ್, ಕೆ. ಸುಂದರ ಕುಲಾಲ್, ದಾಮೋದರ ಎ. ಬಂಗೇರ, ಎಂ.ಪಿ. ಬಂಗೇರ ಬಿಜೈ, ಗೀತಾ ಮನೋಜ್, ಗಿರಿಧರ ಜೆ. ಮೂಲ್ಯ, ಬಿ. ಮೋಹನದಾಸ್ ಅಳಪೆ, ರಘು ಎ. ಮೂಲ್ಯ ಮುಂಬೈ, ಸುನಿಲ್ ಆರ್. ಸಾಲ್ಯಾನ್ ಮುಂಬೈ, ದಿವಾಕರ ಮೂಲ್ಯ ಬೆಂಗಳೂರು, ಬಿ. ದಿನೇಶ್ ಕುಲಾಲ್ ಮುಂಬೈ, ಮಾಧವ ಕುಲಾಲ್ ಬೆಂಗಳೂರು, ವಿವಿಧ ದಾನಿಗಳು, ಸಮಿತಿ ಪದಾಧಿಕಾರಿಗಳು ಮತ್ತು ಸಾವಿರಾರು ಭಾಗವದ್ಬಕ್ತರು ಉಪಸ್ಥಿತರಿದ್ದರು.