ಪರಿಷತ್ ಚುನಾವಣೆ - ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಬೆಂಬಲಿಗರು ಹಾಗೂ ಶಾಸಕ ಯಶ್ ಪಾಲ್ ಸುವರ್ಣ ಬೆಂಗಲಿಗರ ನಡುವೆ ತಾರಕಕ್ಕೇರಿದ ವಾಕ್ಸಮರ!

Coastal Bulletin
ಪರಿಷತ್ ಚುನಾವಣೆ - ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಬೆಂಬಲಿಗರು ಹಾಗೂ ಶಾಸಕ ಯಶ್ ಪಾಲ್ ಸುವರ್ಣ ಬೆಂಗಲಿಗರ ನಡುವೆ ತಾರಕಕ್ಕೇರಿದ ವಾಕ್ಸಮರ!

ಉಡುಪಿ: ವಿಧಾನ ಪರಿಷತ್​​ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಸೇರಿದಂತೆ 6 ಕ್ಷೇತ್ರಗಳಿಗೆ ಜೂನ್ 3ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿರುವ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಹಾಗೂ ಹಾಲಿ ಶಾಸಕ ಯಶ್​ಪಾಲ್ ಸುವರ್ಣ ಬೆಂಬಲಿಗರ ನಡುವಣ ವಾಕ್ಸಮರ ಈಗ ತಾರಕಕ್ಕೇರಿದೆ. 2 ದಿನಗಳ ಒಳಗೆ ಸ್ಪಷ್ಟೀಕರಣ ನೀಡುವಂತೆ ರಾಜ್ಯ ಬಿಜೆಪಿ ಶಿಸ್ತು ಸಮಿತಿಯಿಂದ ಗುರುವಾರ ರಘುಪತಿ ಭಟ್​ಗೆ ನೋಟಿಸ್ ಜಾರಿ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಯಶ್​ಪಾಲ್ ಸುವರ್ಣ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ರಘುಪತಿ ಭಟ್ ಬೆಂಬಲಿಗರು ಅಭಿಯಾನ ಆರಂಭಿಸಿದ್ದಾರೆ.

ರಘುಪತಿ ಭಟ್​​ಗೆ ಎಂಎಲ್ಸಿ ಟಿಕೆಟ್ ತಪ್ಪಿಸಿದ್ದೇ ಯಶ್​​ಪಾಲ್ ಸುವರ್ಣ, ನೈಋತ್ಯ ಪದವೀಧರ ಕ್ಷೇತ್ರದಿಂದ ಟಿಕೆಟ್ ನೀಡದಂತೆ ಹೈಕಮಾಂಡ್​​ಗೆ ಮನವಿ ಮಾಡಿದ್ದರು ಯಶ್​ಪಾಲ್. ಈ ಮೂಲಕ ತನ್ನ ರಾಜಕೀಯ ಗುರುವಿಗೇ ಯಶ್​​​ಪಾಲ್ ಖೆಡ್ಡಾ ತೋಡಿದ್ದಾರೆ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟರ್​​ಗಳನ್ನು ಹರಿಯಬಿಡಲಾಗಿದೆ.

ಆದರೆ, ರಘುಪತಿ ಭಟ್ ಮತ್ತು ಅವರ ಬೆಂಬಲಿಗರಿಗೆ ತಿರುಗೇಟು ನೀಡಿರುವ ಯಶ್​ಪಾಲ್ ಸುವರ್ಣ, ರಘುಪತಿ ಭಟ್​​ ಕಳೆದ 25 ವರ್ಷಗಳಿಂದ ವಿವಿಧ ಹುದ್ದೆಗಳನ್ನು ಅನುಭವಿಸಿದ್ದಾರೆ. 55 ವರ್ಷ ವಯಸ್ಸಿನ ಒಳಗೆಯೇ ಪಕ್ಷದಲ್ಲಿ ಅತಿಹೆಚ್ಚು ಅಧಿಕಾರ ಅನುಭವಿಸಿದ್ದಾರೆ. ನಮ್ಮಲ್ಲಿ ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂದು ಹೇಳಿದ್ದಾರೆ. ಈ ಕುರಿತ ಪೋಸ್ಟರ್​​ಗಳೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ರಘುಪತಿ

ಭಟ್ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್​​ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷವು ಈ ಕ್ಷೇತ್ರದಿಂದ ಶಿವಮೊಗ್ಗದ ಡಾ. ಧನಂಜಯ ಸರ್ಜಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿತ್ತು. ಅಲ್ಲದೆ, ಶಿಕ್ಷಕರ ಕ್ಷೇತ್ರದ ಟಿಕೆಟ್ ಅನ್ನು ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿದೆ. ಇದು ರಘುಪತಿ ಭಟ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿರುವ ಹಿನ್ನೆಲೆ ಮಾಜಿ ಶಾಸಕ ರಘುಪತಿ ಭಟ್​ಗೆ ಬಿಜೆಪಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. 2 ದಿನದೊಳಗೆ ಸ್ಪಷ್ಟೀಕರಣ ನೀಡುವಂತೆ ರಾಜ್ಯ ಬಿಜೆಪಿ ಶಿಸ್ತು ಸಮಿತಿಯಿಂದ ರಘುಪತಿ ಭಟ್​ಗೆ ನೋಟಿಸ್​ ನೀಡಲಾಗಿದೆ.

Leave a Comment