ಬಂಟ್ವಾಳ ವಿಧಾನಸಭಾ ಕ್ಷೇತ್ರ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಯುವ ಕಾಂಗ್ರೆಸ್ ಹಾಗೂ ಎನ್‌ಎಸ್ ಯು ಐ ಮತ್ತು ಮಹಿಳಾ ಕಾಂಗ್ರೆಸ್ ಸಮಿತಿ ಇದರ ಸಹಕಾರದೊಂದಿಗೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯ ವಿರುದ್ಧ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೇ 25ರಂದು ಸೋಮವಾರ, ಬೆಳಿಗ್ಗೆ 10.30 ಕ್ಕೆ ಬಿ.ಸಿ.ರೋಡು ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ
















