ಬಂಟ್ವಾಳ :ದ ಕ ಜಿಲ್ಲೆಯಾದ್ಯಂತ ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆಯಾಗಿದ್ದು, ಮುಂದಿನ ದಿನಗಳಲ್ಲೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ತರಗತಿಗಳು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 25 ರಂದು ಶುಕ್ರವಾರ (ನಾಳೆ) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.














